ಬಂಟ್ವಾಳ: ತುಂಬೆ ಬಳಿ ಆಗಸ್ಟ್ 14ರಂದು ಜಾನುವಾರು ಕಳವು ಹಾಗೂ ಅದರ ಅಂಗಾಗಗಳು ಮರುದಿನ ಪತ್ತೆಯಾದ ಘಟನೆಗೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34) ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48) ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18)ಬಂಧಿತರು.
ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ನೆಯಲ್ಲಿ ನಡೆದ ಜಾನುವಾರು ಕಳವು ಹಾಗೂ ಹತ್ಯೆಯ ಆರೋಪಿಗಳಾಗಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು.