ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಅಂತರ ಕಾಲೇಜು ಜುಡೋ ಪಂದ್ಯಾವಳಿಯಲ್ಲಿ ಕೆಎಲ್ಇ ಸಂಸ್ಥೆಯ ಲಿಂಗರಾಜ ಕಾಲೇಜಿನ ಪುರುಷ ಕ್ರೀಡಾಪಟುಗಳು ಚಾಂಪಿಯನ್ ಆಗಿ ಹೊರಹೊಮ್ಮಿದರು. ಸಾಧನೆಗೈದ ವಿದ್ಯಾರ್ಥಿಗಳೊಂದಿಗೆ ಡಾ.ಎಚ್.ಎಸ್.ಮೇಲಿನಮನಿ, ಡಾ.ಸಿ.ರಾಮಾರಾವ್ ಇದ್ದಾರೆ. 
ಜಿಲ್ಲೆ

ಜುಡೋ ಪಂದ್ಯಾವಳಿಯಲ್ಲಿ ಲಿಂಗರಾಜ ಕಾಲೇಜು ಚಾಂಪಿಯನ್

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ಕೆಎಲ್ಇ ಸಂಸ್ಥೆಯ ಚಿಕ್ಕೋಡಿಯ ಬಸವಪ್ರಭು ಕೋರೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ಜರುಗಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಅಂತರ ಕಾಲೇಜು ಜುಡೋ ಪಂದ್ಯಾವಳಿಯಲ್ಲಿ ಕೆಎಲ್ಇ ಸಂಸ್ಥೆಯ ಲಿಂಗರಾಜ ಮಹಾವಿದ್ಯಾಲಯದ ಪುರುಷ ಕ್ರೀಡಾಪಟುಗಳು ಚಾಂಪಿಯನ್ ಆಗಿ ಹೊರಹೊಮ್ಮಿದರು. ಪುರುಷರ ವಿಭಾಗದಲ್ಲಿ ಭೂಷಣ ವನರಸ, ಸೌರಭ ಪಾಟೀಲ ಕ್ರಮವಾಗಿ 73 ಹಾಗೂ 81 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದು ಯೂನಿವರ್ಸಿಟಿ ಬ್ಲೂ ಪ್ರಶಸ್ತಿಗೆ ಭಾಜನರಾದರು. ಸಾಧನೆಗೈದ ವಿದ್ಯಾರ್ಥಿಗಳನ್ನು ಪ್ರಾಚಾರ್ಯ ಡಾ.ಎಚ್.ಎಸ್.ಮೇಲಿನಮನಿ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಸಿ.ರಾಮಾರಾವ್ ಹಾಗೂ ಎಲ್ಲ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.