ಜಿಲ್ಲೆ

ಶಿಗ್ಗಾಂವಿ ಪಟ್ಟಣದಲ್ಲಿ ಬೈಕ್‌ನಿಂದ ಬಿದ್ದು ಸವಾರ ಸಾವು

Haveri - Kariyappa Aralikatti

ಶಿಗ್ಗಾಂವಿ: ಬೈಕ್‌ನಿಂದ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಪಟ್ಟಣದ ಹಳೆ ಬಸ್ ನಿಲ್ದಾಣದ ಬಳಿ ಮಂಗಳವಾರ ನಡೆದಿದೆ.
ಪಟ್ಟಣದ ಗಾಂಧಿನಗರದ ನಿವಾಸಿ ಮಲ್ಲಿಕಾರ್ಜುನ ಈರಪ್ಪ ಬಸರಿಕಟ್ಟಿ (32) ಮೃತ ವ್ಯಕ್ತಿ.
ಇವರು ಹಳೆ ಬಸ್ ನಿಲ್ದಾಣದ ಕಡೆಯಿಂದ ಗಾಂಧಿ ನಗರಕ್ಕೆ ತೆರಳುತ್ತಿದ್ದ ಸಮಯದಲ್ಲಿ ಬೈಕ್‌ನಿಂದ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.