ಜಿಲ್ಲೆ

ಜಿಮ್ನಾಸ್ಟಿಕ್‌ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಸುನಿಲ್ ಪೊನ್ನೇಟಿ

ಕುಶಾಲನಗರ:

ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಈಚೆಗೆ ನಡೆದ ರಾಜ್ಯ ಮಟ್ಟದ ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ಭಾಗವಹಿಸಿದ ಕೂಡಿಗೆ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಅಯ್ಕೆ ಆಗಿದ್ದಾರೆ. ಕಾಲೇಜಿನ ಪ್ರಥಮ ಪಿ.ಯು. ವಿದ್ಯಾರ್ಥಿಗಳಾದ ಹೆಚ್. ಎಂ. ಅಪೇಕ್ಷಾ, ಸಿ.ಎಸ್, ನವ್ಯಶ್ರೀ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಅಯ್ಕೆಯಾದ ವಿದ್ಯಾರ್ಥಿಗಳು.

ಕೂಡಿಗೆ ಕ್ರೀಡಾ ಶಾಲೆಯ ತರಬೇತಿದಾರರಾದ ಸುರೇಖ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.