ಜಿಲ್ಲೆ

ಮಹಾಲಕ್ಷ್ಮಿ ಲೇಔಟ್​ ಅಭಿವೃದ್ಧಿಯೇ ನನ್ನ ಧ್ಯೇಯ: ಸಚಿವ ಕೆ. ಗೋಪಾಲಯ್ಯ ಹೇಳಿಕೆ

ಬೆಂಗಳೂರು: ಶಾಸಕನಾಗಿ ಕ್ಷೇತ್ರದ ಜನತೆಯ ಬೇಡಿಕೆಗಳನ್ನು ಅರಿತಿದ್ದೇನೆ. ಜನರ ಕಲ್ಯಾಣಕ್ಕೆ ಆನೇಕ ಉತ್ತಮ ಕಾರ್ಯಕ್ರಮ ಮಾಡಲಾಗಿದೆ. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯೇ ನನ್ನ ಧ್ಯೇಯವಾಗಿದೆ ಎಂದು ಮಹಾಲಕ್ಷ್ಮಿ ಲೇಔಟ್​ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.

ಅಭಿವೃದ್ಧಿ ಕಾರ್ಯಗಳನ್ನು ಶಾಸಕನಾಗಿ ಪ್ರಾಮಾಣಿಕವಾಗಿ ಮಾಡಿದ್ದೇನೆ

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಫೀನಿಕ್ಸ್​ನಲ್ಲಿ ನಿವಾಸಿಗಳೊಂದಿಗೆ ಚುನಾವಣಾ ಸಂಬಂಧ ಸಭೆ ನಡೆಸಿ ಮಾತನಾಡಿದರು. ಕ್ಷೇತ್ರದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣ, ರಾಣಿ ಅಬ್ಬಕ್ಕದೇವಿ ಕ್ರೀಡಾಂಗಣ, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಪಾರ್ಕ್​, ಶ್ರೀ ಶಿವಕುಮಾರ ಸ್ವಾಮೀಜಿ ಪಾರ್ಕ್​, ನವನಂದಿನಿ ಪಾರ್ಕ್​ ಆಸ್ಪತ್ರೆಗಳು, ಹೆರಿಗೆ ಆಸ್ಪತ್ರೆ, ನಮ್ಮ ಕ್ಲಿನಿಕ್​, ಉತ್ತಮ ಗುಣಮಟ್ಟದ ರಸ್ತೆಗಳು ಸೇರಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಶಾಸಕನಾಗಿ ಪ್ರಾಮಾಣಿಕವಾಗಿ ಮಾಡಿದ್ದೇನೆ ಎಂದರು.

ಮೋದಿ ದೇಶದ ಪ್ರಧಾನಿಯಾದ ಮೇಲೆ ಭಾರತಕ್ಕೆ ಹೆಚ್ಚಿನ ಗೌರವ ಸಿಕ್ಕಿದೆ

ನಮ್ಮೆಲ್ಲರ ನೆಚ್ಚಿನ ನಾಯಕರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾದ ಮೇಲೆ ಭಾರತಕ್ಕೆ ಹೆಚ್ಚಿನ ಗೌರವ ಸಿಕ್ಕಿದೆ, ವಿಶ್ವದಲ್ಲಿ ದೇಶ ಗುರುತಿಸಿಕೊಂಡಿದೆ ಎಂದರು.

ಕೋವಿಡ್​ ಸಮಯದಲ್ಲಿ ಕ್ಷೇತ್ರದ ಜನರ ಸಂಕಷ್ಟವನ್ನು ಅರಿತು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಮನೆ ಮನೆಗೆ ಆಹಾರ ಕಿಟ್​, ಆರೋಗ್ಯ ಕಿಟ್​, ಆಕ್ಸಿಜನ್​ ಸಿಲಿಂಡರ್​ ವ್ಯವಸ್ಥೆ, ಲಸಿಕೆ, ಮಾತ್ರೆಗಳು ಹೀಗೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.

ಮಾಜಿ ಶಾಸಕ ನೆ.ಲ. ನರೇಂದ್ರಬಾಬು, ಮಾಜಿ ಉಪಮೇಯರ್​ ಎಸ್​. ಹರೀಶ್​, ಸೇತುರಾಮ್​, ಮಹೇಶ್​, ವೆಂಕಟೇಶ್​ಮೂರ್ತಿ, ವಿನೋದ್​, ಡಾ.ಗೋಪಾಲ್​, ಮಂಜುನಾಥ್​ ಸೇರಿ ಬಿಜೆಪಿಯ ಸ್ಥಳಿಯ ಮುಖಂಡರು, ಕಾರ್ಯಕರ್ತರಿದ್ದರು.