ಜಿಲ್ಲೆ

ರಡ್ಡಿ ಬ್ಯಾಂಕ್ ಅಧ್ಯಕ್ಷರಾಗಿ ಕೆ.ಎಲ್. ಪಾಟೀಲ

ಹುಬ್ಬಳ್ಳಿ : ಧಾರವಾಡದ ರಡ್ಡಿ ಸಹಕಾರ ಬ್ಯಾಂಕಿನ ಅಧ್ಯಕ್ಷರಾಗಿ ನ್ಯಾಯವಾದಿ ಮತ್ತು ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೆ.ಎಲ್. ಪಾಟೀಲ ಅವರು ಅವಿರೋಧವಾಗಿ ಪುನರಾಯ್ಕೆಗೊಂಡಿದ್ದಾರೆ.

ಬ್ಯಾಂಕಿನ ಉಪಾಧ್ಯಕ್ಷರಾಗಿ ಎಸ್.ಎನ್. ನಾಡಗೌಡ ಅವರು ಸಹ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಕೆ.ಎಲ್. ಪಾಟೀಲ ಅವರು 1998ರಿಂದ ರಡ್ಡಿ ಬ್ಯಾಂಕಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಸದ್ಗುರು ಶ್ರೀ ಸಿದ್ಧಾರೂಢ ಮಠದ ಟ್ರಸ್ಟಿಯಾಗಿಯೂ ಕಳೆದ 20 ವರ್ಷಗಳಿಂದ ಸೇವೆ ಸಲ್ಲಸಿಉತ್ತಿದ್ದಾರೆ.

ಸಹಕಾರ ಸಂಘಗಳ ಸಹಾಯಕ ನಿಬಂಧಕ ನಿಂಗರಾಜು ಎಸ್. ಅವರು ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು.