ಜಿಲ್ಲೆ

ಕೆ.ಆರ್.ಸನ್ಮತಿ ರಾಜ್ಯಮಟ್ಟಕ್ಕೆ ಆಯ್ಕೆ

ಬೇಲೂರು: ಹಾಸನ ಡಯಟ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರ ಗೋಷ್ಠಿ ಸ್ಪರ್ಧೆಯಲ್ಲಿ ಬೇಲೂರಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿ ಕೆ.ಆರ್.ಸನ್ಮತಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾಡಳಿತ ಹಾಗೂ ತರಬೇತಿ ಸಂಸ್ಥೆಯಿಂದ ಹಾಸನದ ಡಯಟ್‌ನಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರ ಗೋಷ್ಠಿ ಸ್ಪರ್ಧೆಯ ಕೃತಕ ಬುದ್ಧಿಮತ್ತೆ ವಿಷಯದಲ್ಲಿ ಭಾಗವಹಿಸಿದ್ದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹತ್ತನೇ ತರಗತಿ ವಿದ್ಯಾರ್ಥಿನಿ ಸನ್ಮತಿ. ಕೆ.ಆರ್, ಅತ್ಯುತ್ತಮವಾಗಿ ವಿಚಾರ ಮಂಡಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮುಖ್ಯ ಶಿಕ್ಷಕ ಎಚ್.ಕೆ.ಚಂದ್ರಶೇಖರ್ ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.

ಹಾಸನದ ಡಯಟ್ ಪ್ರಾಂಶುಪಾಲ ರಂಗನಾಥಸ್ವಾಮಿ, ನೋಡಲ್ ಅಧಿಕಾರಿ ಗಿರೀಶ್, ಹಿರಿಯ ಉಪನ್ಯಾಸಕ ನಟರಾಜ್, ಶೇಖರ್, ತೀರ್ಪುಗಾರ ಬಿ.ಎಂ.ದಯಾನಂದ್, ಅಂಜನಪ್ಪ, ಲೋಲಾಕ್ಷಿ ಇದ್ದರು.