ಜಿಲ್ಲೆ

ಸಚಿವ ಸುಧಾಕರ್ ತಂದೆಗೆ ಕರೊನಾ ಸೋಂಕು ಬೆನ್ನಲ್ಲೇ ಪತ್ನಿ, ಮಗಳಿಗೂ ಮಹಾಮಾರಿ ಕಂಟಕ

ಚಿಕ್ಕಬಳ್ಳಾಪುರ: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರ ತಂದೆ ಕೇಶವರೆಡ್ಡಿ ಅವರಿಗೆ ಕರೊನಾ ಸೋಂಕು ಇರುವುದನ್ನು ಸ್ವತಃ ಸುಧಾಕರ್​ ಅವರೇ ನಿನ್ನೆ ಟ್ವಿಟರ್​ ಮೂಲಕ ನಿನ್ನೆ ತಿಳಿಸಿದ್ದರು. ಇದೀಗ ಕುಟುಂಬದ ಮತ್ತಿಬ್ಬರಿಗೆ ಕರೊನಾ ಸೋಂಕು ವಕ್ಕರಿಸಿರುವುದಾಗಿ ಟ್ವೀಟ್​ ಮಾಡಿದ್ದಾರೆ.

ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗು ಮಗಳಿಗೆ ಕರೊನಾ ಪಾಸಿಟಿವ್ ಬಂದಿದೆ. ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕರೊನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ ಎಂದು ಇಂದು ಬೆಳಗ್ಗೆ ಟ್ವೀಟ್​ ಮಾಡಿದ್ದಾರೆ. ಇದನ್ನೂ ಓದಿ: ಪತ್ನಿ ಹತ್ಯೆಗೈದು ವಿಮಾನದಲ್ಲಿ ಕೋಲ್ಕತಗೆ ತೆರಳಿ ಅತ್ತೆಯನ್ನು ಕೊಂದು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಇನ್ನು ಸುಧಾಕರ್​ ಅವರ ತಂದೆ ಕೇಶವರೆಡ್ಡಿ ಅವರು ಚಿಕ್ಕಬಳ್ಳಾಪುರದ ಜಿಲ್ಲಾ ಪಂಚಾಯ್ತಿಯ ಹಾಲಿ ಸದಸ್ಯರು. ಕಳೆದ ಜೂನ್ 19ರಂದು ಜಿಲ್ಲಾಧಿಕಾರಿ ಆರ್. ಲತಾ ಅವರ ಹುಟ್ಟುಹಬ್ಬಕ್ಕೆ ಕೇಶವರೆಡ್ಡಿ ಅವರೇ ಸ್ವತಃ ಹೋಗಿ, ನೇರವಾಗಿ ಶುಭಾಶಯ ಕೋರಿದ್ದರು.

ಚಿಕ್ಕಬಳ್ಳಾಪುರದಲ್ಲಿನ ಸಚಿವರ ಕಚೇರಿಯಲ್ಲಿಯೂ ಕೇಶವರೆಡ್ಡಿ ಅವರು ಸ್ಥಳೀಯ ಮುಖಂಡರಗಳೊಂದಿಗೆ ಸಭೆ ನಡೆಸಿದ್ದರು. ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರದಲ್ಲಿ ಇರುವ ತಮ್ಮ ನಿವಾಸದಲ್ಲಿ ಎರಡು ದಿನ ಇದ್ದು ಜನರೊಂದಿಗೆ ಬೆರೆತ್ತಿದ್ದರು. ಇದನ್ನೂ ಓದಿ: ವಿಚ್ಛೇದಿತ ಮಹಿಳೆಯನ್ನು ವೈವಾಹಿಕ ಜಾಲತಾಣದಲ್ಲಿ ಪರಿಚಯಿಸಿಕೊಂಡ ವ್ಯಕ್ತಿ ಮಾಡಿದ್ದು ನಂಬಿಕೆ ದ್ರೋಹ

ಕೇಶವರೆಡ್ಡಿ ಅವರೊಂದಿಗೆ ನೇರ ಸಂಪರ್ಕದಲ್ಲಿದ್ದ ಕೋಚಿಮುಲ್ ಮಾಜಿ ನಿರ್ದೇಶಕರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಮುಖಂಡರಲ್ಲಿಯೂ ಈಗ ಆತಂಕ ಶುರುವಾಗಿದೆ. ಕೇಶವರೆಡ್ಡಿಯವರ ಸಂಪರ್ಕಕ್ಕೆ ಬಂದಿದ್ದ ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ಅಧಿಕಾರಿಗಳಿಗೆ ಕ್ವಾರಂಟೈನ್ ಭೀತಿಯೂ ಎದುರಾಗಿದೆ.