ಜಿಲ್ಲೆ

ಗ್ರಾಮಾಂತರ ವಲಯಮಟ್ಟದ ಕಬಡ್ಡಿ ಪಂದ್ಯಾಟ : ಪಂಚಲಿಂಗೇಶ್ವರ ಪ್ರೌಢಶಾಲೆಗೆ ಅವಳಿ ಪ್ರಶಸ್ತಿ

ಪುತ್ತೂರು ಗ್ರಾಮಾಂತರ: ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳ ಕಬಡ್ಡಿ ತಂಡ ಗ್ರಾಮಾಂತರ ವಲಯಮಟ್ಟದ ಕಬಡ್ಡಿ ಪಂದ್ಯಾಟದ 14ರ ವಯೋಮಾನದೊಳಗಿನ ಮತ್ತು 17ರ ವಯೋಮಾನದ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಅವಳಿ ಪ್ರಶಸ್ತಿಯೊಂದಿಗೆ ತಾಲೂಕುಮಟ್ಟಕ್ಕೆ ಆಯ್ಕೆಯಾಗಿದೆ.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಪಾಣಾಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ಪಾಣಾಜೆ ಸರ್ಕಾರಿ ಶಾಲೆಯಲ್ಲಿ ಬಾಲಕ ಮತ್ತು ಬಾಲಕಿಯರ ವಿಭಾಗದ ಕಬಡ್ಡಿ ಪಂದ್ಯಾಟ ನಡೆದಿತ್ತು. ಪಂಚಲಿಂಗೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ರಶಾದ್ 14ರ ವಯೋಮಾನದೊಳಗಿನ ಮತ್ತು ಕಿಶಾನ್ 17ರ ವಯೋಮಾನದ ಬಾಲಕ ವಿಭಾಗದ ಪಂದ್ಯಾಟದಲ್ಲಿ ಬೆಸ್ಟ್ ರೈಡರ್ ಆಗಿ ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಕಬಡ್ಡಿ ತಂಡಕ್ಕೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮುರಳಿಮೋಹನ್ ಶೆಟ್ಟಿ, ಯಶವಂತ್ ತರಬೇತಿ ನೀಡಿದ್ದರು.

ಪುತ್ತೂರು ಗ್ರಾಮಾಂತರ ವಲಯಮಟ್ಟದ ಕಬಡ್ಡಿ ಪಂದ್ಯಾಟದ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದ ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯ ಕಬಡ್ಡಿ ತಂಡ.
ಪುತ್ತೂರು ಗ್ರಾಮಾಂತರ ವಲಯಮಟ್ಟದ ಕಬಡ್ಡಿ ಪಂದ್ಯಾಟದ 14ರ ವಯೋಮಾನದೊಳಗಿನ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದ ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯ ಕಬಡ್ಡಿ ತಂಡ.