ಜಿಲ್ಲೆ

ಉತ್ತಮ ಆರೋಗ್ಯಕ್ಕೆ ಕ್ರೀಡೆ ಬಹುದೊಡ್ಡ ಔಷಧ : ಪೊಲೀಸ್ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅಭಿಮತ

ಸೌಮ್ಯ ಆರ್

ಉಪ್ಪಿನಂಗಡಿ: ಶಿಕ್ಷಣ ಹಾಗೂ ಆರೋಗ್ಯವಂತ ಯುವಜನತೆ ಈ ದೇಶದ ಸಂಪತ್ತಾಗಿದ್ದು, ಉತ್ತಮ ಆರೋಗ್ಯಕ್ಕೆ ಕ್ರೀಡೆ ಬಹುದೊಡ್ಡ ಔಷಧ ಎಂದು ಪುತ್ತೂರು ಗ್ರಾಮಾಂತರ ಪೊಲೀಸ್ ವೃತ್ತನಿರೀಕ್ಷಕ ರವಿ ಬಿ.ಎಸ್. ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ಮತ್ತು ಉಪ್ಪಿನಂಗಡಿ ಸರ್ಕಾರಿ ಪಿಯು ಕಾಲೇಜು ಆಶ್ರಯದಲ್ಲಿ ತಾಲೂಕುಮಟ್ಟದ ಬಾಲಕ ಹಾಗೂ ಬಾಲಕಿಯರ ಮ್ಯಾಟ್ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ರೋಟರಿ ಉಪ್ಪಿನಂಗಡಿ ವಲಯ 15ರ ಸಹಾಯಕ ಗವರ್ನರ್ ಡಾ.ರಾಜಾರಾಮ್ ಕೆ.ಬಿ. ಕಾರ್ಯಕ್ರಮ ಉದ್ಘಾಟಿಸಿದರು.

ದ.ಕ. ಜಿಲ್ಲಾ ಕ್ರೀಡಾ ಸಂಚಾಲಕ ಪ್ರೇಮನಾಥ ಶೆಟ್ಟಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನೈಾಕ್, ಅಮೆಚೂರು ಕಬಡ್ಡಿ ಅಸೋಸಿಯೇಶನ್ ಜಿಲ್ಲಾ ಕಾರ್ಯಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಉಪ್ಪಿನಂಗಡಿ ಗ್ರಾಪಂ ಅಧ್ಯಕ್ಷೆ ಲಲಿತಾ, ಉಪಾಧ್ಯಕ್ಷೆ ವಿದ್ಯಾಲಕ್ಷ್ಮೀ ಪ್ರಭು, ಸದಸ್ಯರಾದ ಯು.ಟಿ.ತೌಸೀಫ್, ಸದಸ್ಯರಾದ ಅಬ್ದುಲ್ ರಹಿಮಾನ್ ಕೆ., ಅಬ್ದುಲ್ ರರಝಾಕ್, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಸುನೀಲ್ ಕುಮಾರ್ ದಡ್ಡು, ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಉಪ್ಪಿನಂಗಡಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್, ಉಪ್ಪಿನಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಜಾನ್ ಕೆನ್ಯೂಟ್, ಅರಫಾ ವಿದ್ಯಾಸಂಸ್ಥೆಯ ಆಡಳಿತ ನಿರ್ದೇಶಕ ಶಫೀಕ್ ಅರಫಾ, ಜೋಸಿಸ್ ಆಯುರ್ವೇದ ಆಸ್ಪತ್ರೆಯ ಡಾ.ಸುಪ್ರೀತ್ ಲೋಬೋ, ನಿವೃತ ಸೈನಿಕ ಜಯಕುಮಾರ್ ಪೂಜಾರಿ, ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ.ಕೃಷ್ಣಾನಂದ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಅನಿ ಮಿನೆಜಸ್, ನಝೀರ್ ಮಠ, ಅಬ್ದುರ‌್ರಹ್ಮಾನ್ ಯುನಿಕ್, ನಾಗೇಶ ಪ್ರಭು, ಆದಂ ಕೊಪ್ಪಳ, ಇಬ್ರಾಹೀಂ ಕೆ., ವೆಂಕಪ್ಪ ಪೂಜಾರಿ ಮರುವೇಲು, ಉಷಾ ಎ.ಎಸ್. ಮೊದಲಾದವರಿದ್ದರು. ಕಾಲೇಜಿನ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಅಝೀಝ್ ಬಸ್ತಿಕ್ಕಾರ್ ಸ್ವಾಗತಿಸಿದರು. ಉಪನ್ಯಾಸಕಿ ನವ್ಯಶ್ರೀ ಸ್ವರ್ಗ ನಿರೂಪಿಸಿದರು. ಪ್ರಾಂಶುಪಾಲ ಇಬ್ರಾಹಿಂ ಎಂ. ವಂದಿಸಿದರು.

ಸಾಧಕರಿಗೆ ಸನ್ಮಾನ

ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಮಿಥುನ್ ಗೌಡ, ಹಸನ್ ಮಹಮ್ಮದ್ ನಿಶಾನ್, ನಾಸಿರ್ ಕುಪ್ಪೆಟ್ಟಿ ಹಾಗೂ ಉತ್ತಮ ಕರ್ತವ್ಯಕ್ಕೆ ರಾಷ್ಟ್ರಪತಿ ಪದಕ ಪಡೆದ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರನ್ನು ಸನ್ಮಾನಿಸಲಾಯಿತು. ಉಪ್ಪಿನಂಗಡಿ ಗ್ರಾ.ಪಂ. ವತಿಯಿಂದ ಕಾಲೇಜಿಗೆ 2.05 ಲಕ್ಷ ರೂ. ವೆಚ್ಚದ ಕಬಡ್ಡಿ ವ್ಯಾಟ್ ನೀಡಲಾಯಿತು.