ಜಿಲ್ಲೆ

ಕ್ರೀಡಾಕೂಟಗಳಿಂದ ಪ್ರತಿಭೆ ಅನಾವರಣ : ವಿಶ್ವನಾಥ ಕೊಪ್ಪ ಅನಿಸಿಕೆ

ಸೌಮ್ಯ ಆರ್

ಕಡಬ: ಗ್ರಾಮೀಣ ಪ್ರದೇಶದಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಲು ಇಂತಹ ಕ್ರೀಡಾಕೂಟ ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಂಡು ರಾಜ್ಯ, ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂದು ಕಾಣಿಯೂರು ಗ್ರಾಪಂ ಅಧ್ಯಕ್ಷ ವಿಶ್ವನಾಥ ಕೊಪ್ಪ ಹೇಳಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಕಾಣಿಯೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ಕಾಣಿಯೂರು ಸ.ಹಿ.ಪ್ರಾ.ಶಾಲೆಯಲ್ಲಿ ಸವಣೂರು ವಲಯಮಟ್ಟದ 14ರ ವಯೋಮಾನದ ಶಾಲಾ ಬಾಲಕ- ಬಾಲಕಿಯರ ಕಬಡ್ಡಿ ಟೂರ್ನಿ ಉದ್ಘಾಟಿಸಿ ಮಾತನಾಡಿದರು.

ಕಾಣಿಯೂರು ಸ.ಹಿ.ಪ್ರಾ.ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಪರಮೇಶ್ವರ ಅನಿಲ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ ಪ್ರಾಸ್ತಾವಿಕ ಮಾತನಾಡಿದರು. ಕಾಣಿಯೂರು ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ ಶುಭಹಾರೈಸಿದರು. ಕಾಣಿಯೂರು ಶ್ರೀ ಮಠದ ಮ್ಯಾನೇಜರ್ ಶ್ರೀನಿಧಿ ಆಚಾರ್, ಕಾಣಿಯೂರು ಗ್ರಾಪಂ ಸದಸ್ಯ ರಾಮಣ್ಣ ಗೌಡ ಮುಗರಂಜ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಗಣೇಶ್ ಉದನಡ್ಕ, ಬೆಳಂದೂರು ಗ್ರಾಪಂ ಉಪಾಧ್ಯಕ್ಷ ಜಯಂತ ಅಬೀರ, ದ.ಕ. ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಕಾರ್ಯಾಧ್ಯಕ್ಷ ಮಾಮಚ್ಚನ್, ದ.ಕ. ಜಿಲ್ಲೆ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಿಂಗರಾಜು, ಸವಣೂರು ವಲಯ ನೋಡಲ್ ಅಧಿಕಾರಿ ಕೃಷ್ಣಪ್ರಸಾದ್, ಕಡಬ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಶ್ರೀಲತಾ, ಸಿ.ಆರ್.ಪಿ ಯಶೋದಾ, ಎಸ್‌ಡಿಎಂಸಿ ಉಪಾಧ್ಯಕ್ಷೆ ಯಶೋದಾ ನೇರೋಳ್ತಡ್ಕ ಉಪಸ್ಥಿತರಿದ್ದರು. ಮುಖ್ಯಗುರು ಬಾಲಕೃಷ್ಣ ಕೆ. ಸ್ವಾಗತಿಸಿದರು. ಶಿಕ್ಷಕಿ ವೀಕ್ಷಿತಾ ವಂದಿಸಿದರು. ಶಿಕ್ಷಕಿ ಸುಜಯ ಕಾರ್ಯಕ್ರಮ ನಿರೂಪಿಸಿದರು.

ಸನ್ಮಾನ, ಫಲಕ ಅನಾವರಣ

ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ಕಬ್ಬಡಿ ಆಟಗಾರರಾದ ಸೌಮ್ಯಾ ಅಬೀರ ಅವರನ್ನು ಸನ್ಮಾನಿಸಲಾಯಿತು. ಪ್ರಥಮ ಮತ್ತು ದ್ವಿತೀಯ ಹಾಗೂ ವೈಯಕ್ತಿಕ ಫಲಕಗಳನ್ನು ಕಲ್ಪಡ ಕೊಡಿಯಾಲ ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟ್ ಅಧ್ಯಕ್ಷ ಸುಬ್ರಹ್ಮಣ್ಯ ಕೆ.ಎಂ.ಕಲ್ಪಡ ಹಾಗೂ ಕೂಡುರಸ್ತೆ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಕ್ಷಿತ್ ಮುಗರಂಜ ಅನಾವರಣಗೊಳಿಸಿದರು.