ವಿಜಯವಾಣಿ ಸುದ್ದಿಜಾಲ ಬಂಟ್ವಾಳ
ಕ್ರೀಡೆಗಳು ಜೀವನದ ಅವಿಭಾಜ್ಯ ಅಂಗವಾಗಿವೆ. ಮಣ್ಣಿನ ಸೊಗಡಿನ ಕಬಡ್ಡಿ ಪಂದ್ಯಾಟವು ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿದ್ದು ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಜತೆಗೆ ಶಾರೀರಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಈ ಆಟ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಬಂಟ್ವಾಳ ನಗರ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಹೇಳಿದರು.
ವೀರಕಂಬ ಗ್ರಾಮದ ಮಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಂಟ್ವಾಳ ತಾಲೂಕುಮಟ್ಟದ 14 ವರ್ಷದ ಒಳಗಿನ ವಯೋಮಿತಿಯ ಬಾಲಕ- ಬಾಲಕಿಯರ ಕಬ್ಬಡಿ ಪಂದ್ಯಾಟದ ಕ್ರೀಡಾಂಗಣ ಉದ್ಘಾಟಿಸಿ ಮಾತನಾಡಿದರು.
ವೀರಕಂಬ ಗ್ರಾಪಂ ಉಪಾಧ್ಯಕ್ಷ ಜನಾರ್ದನ ಪೂಜಾರಿ ಗೋಳಿಮಾರ್ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಅಭಿನಂದನಾ ಪತ್ರ ಹಸ್ತಾಂತರಿಸಿದರು. ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಪರೀಕ್ಷಾಧಿಕಾರಿ ಆಶಾ ನಾಯಕ್ ಪ್ರಾಸ್ತಾವಿಕ ಮಾತನಾಡಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಬಂಟ್ವಾಳ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ, ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾಜೇಂದ್ರ ರೈ, ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಅಧ್ಯಕ್ಷ ದಿವಾಕರ್ ಶೆಟ್ಟಿ, ರೋಟರಿ ಅಸಿಸ್ಟೆಂಟ್ ಗವರ್ನರ್ ಪದ್ಮನಾಭ ರೈ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೊರಗಪ್ಪ ನಾಯ್ಕ, ವಿಟ್ಲ ಟೌನ್ ಪಂಚಾಯಿತಿ ಸದಸ್ಯ ರವೀಶ್ ವಿಟ್ಲ, ಸಂತೋಷ್ ಕುಮಾರ್ ಶೆಟ್ಟಿ ಪೆಲತಡ್ಕ, ಉದ್ಯಮಿಗಳಾದ ರಾಜೇಂದ್ರ ಹೊಳ್ಳ, ಸಂಜೀವ ಪೂಜಾರಿ ಬಿರ್ವ, ಪ್ರಮುಖರಾದ ಕೃಷ್ಣಪ್ಪ ಪೂಜಾರಿ ಕೇಪುಳಕೋಡಿ, ಜಯಪ್ರಕಾಶ್ ತೆಕ್ಕಿಪಾಪು, ಜಯರಾಮ ರೈ ಕಲ್ಲಡ್ಕ, ನಿವೃತ್ತ ಸೇನಾನಿ ಚಂದ್ರಶೇಖರ್, ಪಂಚಾಯಿತಿ ಸದಸ್ಯ ಸಂದೀಪ್ ಕೆಲಿಂಜ, ಮಾತೃಶ್ರೀ ಗೆಳೆಯ ಬಳಗದ ಅಧ್ಯಕ್ಷ ರಮೇಶ್ ಗೌಡ ಮೈರಾ, ಪ್ರಕಾಶ್ ಬೆತ್ತಸರವು, ಲಯನ್ಸ್ ಕ್ಲಬ್ ಅಮ್ಟೂರು ಅಧ್ಯಕ್ಷ ಇಲಿಯಾಸ್ ಡಿಸೋಜ, ಶಿಕ್ಷಕ ಜಗದೀಶ ರೈ ಉಪಸ್ಥಿತರಿದ್ದರು.
ಮಜಿ ಶಾಲಾ ಮುಖ್ಯಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ಸ್ವಾಗತಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಇಂದುಶೇಖರ್ ವಂದಿಸಿದರು. ಶಿಕ್ಷಕಿ ಸಂಗೀತಾ ಶರ್ಮ ಪಿ.ಜಿ. ಹಾಗೂ ಅನುಷಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ನಾಗೇಶ್ ಗಣೇಶ್ ಕೊಡಿ, ಮೋನಪ್ಪ ಗಣೇಶ್ ಕೊಡಿ, ರತನ್ ಆಳ್ವ ಸಹಕರಿಸಿದರು.