ಕಡಬ ಸರಸ್ವತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ತರಗತಿಗೆ ವಿಶೇಷವಾಗಿ ಸ್ವಾಗತಿಸಿ, ಬರಮಾಡಿಕೊಳ್ಳಲಾಯಿತು. 
ಜಿಲ್ಲೆ

ಕಡಬ ಸರಸ್ವತಿ ಶಾಲೆಯಲ್ಲಿ ಆರಂಭೋತ್ಸವ

ಸೌಮ್ಯ ಆರ್

ಕಡಬ: ಇಲ್ಲಿನ ವಿದ್ಯಾನಗರದಲ್ಲಿರುವ ಸರಸ್ವತಿ ವಿದ್ಯಾಲಯದಲ್ಲಿ ೨೦೨೪-೨೫ನೇ ಸಾಲಿನ ಆರಂಭೋತ್ಸವ ಪ್ರಯುಕ್ತ ವಿದ್ಯಾರ್ಥಿಗಳನ್ನು ವಿಶೇಷವಾಗಿ ಬರಮಾಡಿಕೊಳ್ಳಲಾಯಿತು.

ಶಿಕ್ಷಕಿಯರು ಆರತಿ ಬೆಳಗಿ ಸಿಹಿ ಹಂಚುವ ಮೂಲಕ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಬಳಿಕ ಸಭಾ ಕಾರ್ಯಕ್ರಮ ನಡೆದಿದ್ದು, ಅಧ್ಯಕ್ಷತೆ ಸರಸ್ವತಿ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ರವಿರಾಜ್ ಶೆಟ್ಟಿ ವಹಿಸಿದ್ದರು. ಆಡಳಿತ ಮಂಡಳಿ ನಿರ್ದೇಶಕಿ ಪ್ರಮೀಳಾ ಲೋಕೇಶ್ ಹಾಗೂ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕ ಮಾಧವ ಕೋಲ್ಪೆ ಉಪಸ್ಥಿತರಿದ್ದರು. ಶಿಕ್ಷಕ ವಸಂತ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.