ಜಿಲ್ಲೆ

ರಾಮಕುಂಜೇಶ್ವರ ಶಾಲೆಗೆ ಸಮಗ್ರ ಪ್ರಶಸ್ತಿ

ಸೌಮ್ಯ ಆರ್

ಕಡಬ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ ಬಂಟ್ರ ಹಾಗೂ ಬಿಳಿನೆಲೆ ಗೋಪಾಲ ಕೃಷ್ಣ ಪ್ರೌಢಶಾಲೆಯ ಸಹಯೋಗದಲ್ಲಿ ಇತ್ತೀಚೆಗೆ ಕಡಬ ಸೇಂಟ್ ಜೋಕಿಮ್ಸ್ ವಿದ್ಯಾಸಂಸ್ಥೆ ಕ್ರೀಡಾಂಗಣದಲ್ಲಿ ನಡೆದ ಕಡಬ ವಲಯಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 45 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಸ್ಥಾನದೊಂದಿಗೆ ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ನಡೆಯಲಿರುವ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿ ಗಗನ್ ಡಿ.ಎ ವೈಯಕ್ತಿಕ ಚಾಂಪಿಯನ್‌ಷಿಪ್ ಪಡೆದುಕೊಂಡಿದ್ದಾರೆ. ಪ್ರೌಢಶಾಲಾ ಬಾಲಕರ ಪ್ರಥಮ ಸಮಗ್ರ ಹಾಗೂ ಪ್ರಾಥಮಿಕ ಬಾಲಕ-ಬಾಲಕಿಯರ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದಿರುಕೊಂಡಿರುತ್ತಾರೆ.

ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ ಬಿ, ರಾಘವ್, ದಿವ್ಯಾ ಪಿ.ಎನ್, ಕಿಶನ್ ರಾಜ್ ತರಬೇತಿ ನೀಡಿದ್ದಾರೆ.