ಮುಳಬಾಗಿಲು : ಸಾಹಿತ್ಯ ಕ್ಷೇತ್ರದ ದಿಗ್ಗಜ ಡಿ.ವಿ.ಗುಂಡಪ್ಪ ಅವರು ಸಾಹಿತ್ಯದ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಮುತ್ತು ರತ್ನಗಳ ಒಳಗೊಂಡ ಸ್ವರ್ಣ ಕಿರೀಟ ನೀಡಿದ ಮಹಾನ್ ಸಾಧಕರು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಬಣ್ಣಿಸಿದರು.
ನಗರದ ಡಿವಿಜಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸತಿ ಇಲಾಖೆ, ಡಿವಿಜಿ ಪ್ರತಿಷ್ಠಾನ ಹಾಗೂ ಕನ್ನಡ ಸಾಹಿತ್ಯ ಪರಿಷತ್ನಿಂದ ಸೋಮವಾರ ಹಮ್ಮಿಕೊಂಡಿದ್ದ ಡಿವಿಜಿ 138ನೇ ಜಯಂತಿಯಲ್ಲಿ ಮಾತನಾಡಿದರು.
ಕ್ಷೇತ್ರವು ಜಿಲ್ಲೆಯ ಐತಿಹಾಸಿಕ, ಚಾರಿತ್ರಿಕ, ರಾಜಕೀಯ, ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಆದ ಪ್ರಾಮುಖ್ಯತೆ ಹೊಂದಿದೆ. ಅವಿಭಜಿತ ಜಿಲ್ಲೆಗೆ ಸರ್.ಎಂ.ವಿಶ್ವೇಶ್ವರಯ್ಯ, ಡಿ.ವಿ.ಗುಂಡಪ್ಪ ಮತ್ತು ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರು ಜಿಲ್ಲೆಯ ತ್ರಿರತ್ನಗಳು ಎಂದರು.
ಡಿವಿಜಿ ಅವರು ವೈವಿಧ್ಯಮಯ ವ್ಯಕ್ತಿತ್ವ ಹೊಂದಿದ್ದ ವ್ಯಕ್ತಿ. ಅವರ ಮಂಕುತಿಮ್ಮನ ಕಗ್ಗದ ಪದ್ಯಗಳು ನಮ್ಮ ವ್ಯಕ್ತಿತ್ವ ರೂಪಿಸುತ್ತವೆ. ಚಾರಿತ್ರ್ಯ ನಿಮಾರ್ಣ ಮಾಡುವಂತಹ ಶಕ್ತಿ ಡಿವಿಜಿ ಬರವಣಿಗೆಗೆ ಇದೆ. ಜೀವನಕ್ಕೆ ಕಗ್ಗ ದಾರಿದೀಪ ಎಂದರು. ತಹಸೀಲ್ದಾರ್ ವಿ.ಗೀತಾ ಮಾತನಾಡಿ, ಕನ್ನಡ ಸಾರಸ್ವತ್ವ ಲೋಕಕ್ಕೆ ಸ್ವರ್ಣ ಕಿರೀಟವನ್ನು ಕನ್ನಡ ಸಾಹಿತ್ಯದ ಮೂಲಕ ನೀಡಿದ ಮಹಾನ್ ಆದರ್ಶ ಸಾಹಿತಿ ಎಂದರು. ಕನ್ನಡ ಸಾಹಿತ್ಯ ಪರಿಷತ್ನ ಜಿಲ್ಲಾಧ್ಯಕ್ಷ ನಾಯಕರಹಳ್ಳಿ ಎನ್.ಬಿ. ಗೋಪಾಲಗೌಡ, ಮಾಜಿ ಅಧ್ಯಕ್ಷ ಉಪನ್ಯಾಸಕ ಜೆ.ಜಿ.ನಾಗರಾಜ್ ಅವರು ಡಿವಿಜಿ ಅವರ ಜೀವನ ಚರಿತ್ರೆ ಬಗ್ಗೆ ವಿವರಿಸಿದರು. ಡಿವಿಜಿ ಅವರ ಭಾವಚಿತ್ರದ ಪುಷ್ಪ ಪಲ್ಲಕ್ಕಿಗೆ ಶಾಸಕ ಸಮೃದ್ಧಿ ವಿ.ಮಂಜುನಾಥ್ ಚಾಲನೆ ನೀಡಿದರು. ನಗರದ ಮುಖ್ಯ ಬೀದಿಗಳಲ್ಲಿ ಪಲ್ಲಕ್ಕಿ ಮೆರವಣಿಗೆ ಮಾಡಲಾಯಿತು. ತಮಟೆ ವಾದ್ಯ, ಗಾರುಡಿ ಗೊಂಬೆ, ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.
ಜಿಪಂ ಮಾಜಿ ಅಧ್ಯಕ್ಷೆ ಮಂಗಮ್ಮ ಮುನಿಸ್ವಾಮಿ, ತಾಪಂ ಇಒ ಸರ್ವೇಶ್, ಕನ್ನಡ ಸಂಸತಿ ಇಲಾಖೆ ಸಹಾಯಕ ನಿರ್ದೇಶಕಿ ವಿಜಯಲಕ್ಷಿ$್ಮ, ಬಿಇಒ ಕೆ. ಎನ್.ರಾಮಚಂದ್ರ, ನಗರಸಭೆ ಪೌರಾಯುಕ್ತ ವಿ. ಶ್ರೀಧರ್, ಮಾಜಿ ಸದಸ್ಯೆ ರಾಧಿಕಾ ರಾಜಶೇಖರ್, ಕಸಾಪ ಜಿಲ್ಲಾಧ್ಯಕ್ಷ ಗೋಪಾಲಗೌಡ, ತಾಲೂಕು ಅಧ್ಯಕ್ಷ ಜಗದೀಶ್, ಗಡಿನಾಡು ಪ್ರತಿನಿಧಿ ತಾಯಲೂರು ಗೋಪಿನಾಥ್, ಸಾಹಿತಿ ಡಾ. ಆರ್. ಶಂಕರಪ್ಪ, ಕನ್ನಡ ಸಂಘಗಳ ಒಕ್ಕೂಟದ ಅಧ್ಯಕ್ಷ ಶಂಕರ್ ಕೇಸರಿ, ಡಿವಿಜಿ ಕನ್ನಡ ಸಂಘದ ಅಧ್ಯಕ್ಷ ಕೆ. ಮಧುಸೂದನ್, ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಎಚ್. ವೆಂಕಟಗಿರಿಯಪ್ಪ, ಜಿಲ್ಲಾ ಉಪಾಧ್ಯಕ್ಷ ಓಬಳರೆಡ್ಡಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಮುನಿವೆಂಕಟಪ್ಪ, ಡಿವಿಜಿ ಶಾಲೆಯ ಮುಖ್ಯ ಶಿಕ್ಷಕ ಸೊಣ್ಣಪ್ಪ, ಕನ್ನಡ ಸಂಘಗಳ ಒಕ್ಕೂಟದ ಅಧ್ಯಕ್ಷ ಶಂಕರ್ ಕೇಸರಿ, ಡಿವಿಜಿ ಕನ್ನಡ ಸಂಘದ ಅಧ್ಯಕ್ಷ ಕೆ. ಮಧುಸೂದನ್ ಇದ್ದರು.