ಹುತ್ತರಿ ಕೋಲಾಟ ಸಾಂದರ್ಭಿಕ ಚಿತ್ರ 
ಜಿಲ್ಲೆ

ನ.4ಕ್ಕೆ ಕೈಮುಡಿಕೆ ಪುತ್ತರಿ ಕೋಲ್ ಮಂದ್ ಪೂರ್ವಭಾವಿ ಸಭೆ

ಗೋಣಿಕೊಪ್ಪ: ಬೊಟ್ಟಿಯತ್ ಮೂಂದ್ ನಾಡ್ ಕೈಮುಡಿಕೆ ಪುತ್ತರಿ ಕೋಲ್ ಮಂದ್ ಪೂರ್ವಭಾವಿ ಸಭೆ ನ.4ರಂದು ಬೆಳಗ್ಗೆ 10.30ಕ್ಕೆ ಕುಂದಾ ಸಮೀಪದ ಕೈಮುಡಿಕೆ ಕೋಲ್ ಮಂದ್‌ನಲ್ಲಿ ನಡೆಯಲಿದ್ದು ಮೂರು ನಾಡಿನ ತಕ್ಕ ಮುಖ್ಯಸ್ಥರು ಹಾಗೂ ನಾಡಿನವರು ಆಗಮಿಸಿ ಸಲಹೆ ಸಹಕಾರ ನೀಡಬೇಕು ಎಂದು ಮೂರು ನಾಡಿನ ತಕ್ಕಮುಖ್ಯಸ್ಥರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ ತಿಳಿಸಿದ್ದಾರೆ.

ಪ್ರತಿವರ್ಷ ಪುತ್ತರಿ ಕಳೆದು ಮೂರು ದಿನಗಳಲ್ಲಿ ಇತಿಹಾಸ ಪ್ರಸಿದ್ಧ ಕೈಮುಡಿಕೆ ಪುತ್ತರಿ ಕೋಲ್ ಮಂದ್ ನಡೆಯಲಿದ್ದು, ಆ ಸಂದರ್ಭದಲ್ಲಿ ಬೊಟ್ಟಿಯತ್ ನಾಡ್, ಕುತ್ತ್ ನಾಡ್ ಹಾಗೂ ಬೇರಳಿ ನಾಡ್ ಈ ಮೂರು ನಾಡಿಗೆ ಸೇರಿದ ವಿವಿಧ ಊರುಗಳ ತಕ್ಕ ಮುಖ್ಯಸ್ಥರು ಸೇರಿದಂತೆ ಗ್ರಾಮಸ್ಥರು ಒಂದೆಡೆ ಸೇರಿ ಸಾಂಪ್ರದಾಯಿಕ ಕೋಲ್ ಮಂದ್‌ಅನ್ನು ವಿಜೃಂಭಣೆಯಿಂದ ನಡೆಸಲಾಗುತ್ತದೆ. ಈ ಸಂದರ್ಭ ಮೂರು ನಾಡಿನವರಿಗೆ ವಿವಿಧ ಪೈಪೋಟಿ ಸೇರಿದಂತೆ ಸಾರ್ವಜನಿಕರಿಗೂ ಮುಕ್ತವಾಗಿ ಪೈಪೋಟಿ ಏರ್ಪಡಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದರ ರೂಪುರೇಷೆಗಳನ್ನು ಹಾಕಿಕೊಳ್ಳಲು ಹಾಗೂ ಹಬ್ಬವನ್ನು ಯಾವ ರೀತಿ ಆಚರಿಸಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಸಭೆಯಲ್ಲಿ ಕುತ್ತ್ ನಾಡ್ ತಕ್ಕರಾದ ಪಂದಿಮಾಡ ಅಚ್ಚಪ್ಪ, ಬೇರಳಿನಾಡ್ ತಕ್ಕರಾದ ಮಳವಂಡ ಭುವೇಶ್ ಸೇರಿದಂತೆ ವಿವಿಧ ಊರುತಕ್ಕರು ಉಪಸ್ಥಿತರಿರುವರು. ಈಗಾಗಲೇ ಸಭೆಯ ಬಗ್ಗೆ ಹಲವರಿಗೆ ಮಾಹಿತಿ ನೀಡಲಾಗಿದ್ದು, ಮಾಹಿತಿ ಇಲ್ಲದ ತಕ್ಕ ಮುಖ್ಯಸ್ಥರು ಸೇರಿದಂತೆ ಮೂರು ನಾಡಿನ ಗ್ರಾಮಸ್ಥರು ಸಭೆಗೆ ಆಗಮಿಸಿ ಸಲಹೆ ಸಹಕಾರ ನೀಡಬೇಕಿದೆ ಎಂದು ಬೊಟ್ಟಿಯತ್ ನಾಡ್ ತಕ್ಕ ಹಾಗೂ ಮೂರು ನಾಡಿನ ತಕ್ಕ ಮುಖ್ಯಸ್ಥರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ ಮಾಹಿತಿ ನೀಡಿದ್ದಾರೆ.