ಬೆಂಗಳೂರು: ಕಲಾ ದರ್ಪಣ ಆರ್ಟ್ ರಿಫ್ಲೆಕ್ಟ್ ಬೇಸಿಗೆ ರಜೆಯಲ್ಲಿರುವ ಮಕ್ಕಳಿಗಾಗಿ ಮೇ.5ಕ್ಕೆ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಿದೆ. ಈ ಸ್ಪರ್ಧೆಯು ಮೂರು ವಿಭಾಗಗಳಲ್ಲಿ ನಡೆಯಲಿದ್ದು, 8 ವರ್ಷದ ಒಳಗಿನ ಮಕ್ಕಳು, 12ವರ್ಷದ ಒಳಗಿನ ಮಕ್ಕಳು, 16 ವರ್ಷದ ಒಳಗಿನ ಮಕ್ಕಳಿಗೆ ಪ್ರತ್ಯೇಕವಾಗಿ ಸ್ಪರ್ಧೆ ನಡೆಯಲಿದೆ. ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ಕೊಡಲಾಗುವುದು. ವಿಜೇತರಿಗೆ ವಿಶೇಷ ಬಹುಮಾನಗಳನ್ನು ಕೊಡಲಾಗುವುದು.
ಇದೇ ಸಂದರ್ಭದಲ್ಲಿ ಅಸಾಮಾನ್ಯ ಬಾಲಪ್ರತಿಭೆಗಳನ್ನು ಗುರುತಿಸಿ ಕಲಾ ದರ್ಪಣ ವಾರ್ಷಿಕ ಪ್ರಶಸ್ತಿಗಳನ್ನು ಕೂಡ ಈ ಕಾರ್ಯಕ್ರಮದಲ್ಲಿ ಕೊಡಲಾಗುತ್ತಿದೆ. ಕಲಾ ಸಾಧಕರಿಗೆ ವಾರ್ಷಿಕ ಪ್ರಶಸ್ತಿಯನ್ನು ಕೊಡಲಾಗುತ್ತಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ವಿನಾಯಕ ಪಾಟೀಲ್ ತಿಳಿಸಿದ್ದಾರೆ.
ಈಗಾಗಲೇ ಹೆಸರು ನೊಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತರು ತಮ್ಮ ಹೆಸರನ್ನು ನೊಂದಾಯಿಸಲು ಮೊಬೈಲ್ ಸಂಖ್ಯೆ 93806 71947 ಕ್ಕೆ ಕರೆ ಮಾಡಬಹುದು. ಹೆಸರು ನೋಂದಾಯಿಸಲು ಏ.29 ಕೊನೆಯ ದಿನ.