ಜಿಲ್ಲೆ

ಕಲಾಸಿಂಚನ ಕಾರ್ಯಕ್ರಮ ನಾಳೆ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಕಲಾರ್ಪಣ ಟ್ರಸ್ಟ್​ ವತಿಯಿಂದ ಟ್ರಸ್ಟ್​ನ ವಾರ್ಷಿಕೋತ್ಸವ ನಿಮಿತ್ತ ಇಲ್ಲಿನ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಫೆ. 16ರಂದು ಸಂಜೆ 4.30ಕ್ಕೆ ಕಲಾಸಿಂಚನ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಕಾರ್ಯಕ್ರಮ ಉದ್ಘಾಟಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಉಪಸ್ಥಿತರಿರುವರು. ವಿದುಷಿ ಪ್ರಮೋದಾ ಉಪಾಧ್ಯಾಯ, ವಿದುಷಿ ಸೀಮಾ ಕುಲಕರ್ಣಿ ಹಾಗೂ ಆತ್ಮಾನಂದ ಕಬ್ಬೂರ ಅವರಿಗೆ ಸನ್ಮಾನಿಸಲಾಗುವುದು. ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.