ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಕ್ರೀಡಾ ಇಲಾಖೆ, ಗುಲ್ಬರ್ಗ ವಿವಿ ದೈಹಿಕ ಶಿಕ್ಷಣ ವಿಭಾಗ, ವಿವಿಧ ಕ್ರೀಡೆಗಳ ಅಸೋಸಿಯೇಷನ್‌ಗಳು ಕ್ರೀಡೆಗೆ ನಿರಂತರವಾಗಿ ಪ್ರೋತ್ಸಾಹ ನೀಡುತ್ತಿವೆ. ಅವುಗಳ ಸದುಪಯೋಗ ಪಡೆದು ರಾಜ್ಯ, ರಾಷ್ಟç ಮಟ್ಟದಲ್ಲಿ ಸಾಧನೆ ತೋರಬೇಕು ಎಂದು ಗುಲ್ಬರ್ಗ ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಹಣಮಂತ ಜಂಗ್ಲೆ ತಿಳಿಸಿದರು.
ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಜಿಲ್ಲಾ ಒಲಿಂಪಿಕ್ ಅಸೋಸಿಯೇಷನ್, ಜಿಲ್ಲಾ ಹ್ಯಾಂಡ್‌ಬಾಲ್ ಅಸೋಸಿಯೇಷನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಕಲ್ಯಾಣ ಕರ್ನಾಟಕ ಹ್ಯಾಂಡ್ ಬಾಲ್ ಕ್ರೀಡಾಕೂಟಕ್ಕೆ ಭಾನುವಾರ ಚಾಲನೆ ನೀಡಿ ಮಾತನಾಡಿ, ಕ್ರೀಡೆಯಲ್ಲಿ ಹಲವು ಅವಕಾಶಗಳಿದ್ದು, ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಕೇಂದ್ರೀಯ ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಎಂ.ಎಸ್.ಪಾಸೋಡಿ ಉದ್ಘಾಟಿಸಿದರು. ಹಾಕಿ ತರಬೇತುದಾರ ಸಂಜಯ ಬಾಣದ್, ಹ್ಯಾಂಡಬಾಲ್ ಅಸೋಸಿಯೇಷನ್ ಜಿಲ್ಲಾ ಕಾರ್ಯದರ್ಶಿ ದತ್ತಾತ್ರೇಯ ಜೇವರ್ಗಿ, ಸಂಯೋಜಕ ದೀಪಕ ಜೋಶಿ, ಪ್ರವೀಣ ಪುಣೆ, ಶಿವರಾಜ ಪಾಟೀಲ್, ಮಯೂರ, ದಿಲೀಪಕುಮಾರ, ವೈಜನಾಥ ಇತರರಿದ್ದರು.