ಕಲಬುರಗಿ: ಗುಲ್ಬರ್ಗ ಲೋಕಸಭೆ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲುವು ಖಚಿತವಾಗಿದ್ದು, ಅಧಿಕೃತ ಘೋಷಣೆ ಬಾಕಿ ಉಳಿದಿದೆ.
2019ರಲ್ಲಿ ಡಾ.ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದ್ದ, ಡಾ.ಉಮೇಶ್ ಜಾಧವ್ ಇದೀಗ ಅಳಿಯನ ಎದುರು ಕಂಡಿದ್ದಾರೆ.
ಕಲಬುರಗಿಯಲ್ಲಿ ವಿಜಯೋತ್ಸವ: ಕಾಂಗ್ರೆಸ್ ಗೆಲುವಿನ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಬೆಂಬಲಿಗರೊಂದಿಗೆ ವಿಜಯೋತ್ಸವ ಆಚರಿಸಿದರು.