brutally murdered 
ಕಲಬುರಗಿ

ಹಳೆ ದ್ವೇಷ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಕಲಬುರಗಿ: ನಗರದ ಮೋಹನ್ ಲಾಡ್ಜ್ ಹಿಂಭಾಗದ ಪಾಳುಬಿದ್ದ ಪಾರ್ಕ್‌ನಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಡರಾತ್ರಿ ಬೆಳಕಿಗೆ ಬಂದಿದೆ.
ಮೃತನನ್ನು ಸಯ್ಯದ್ ಮೆಹಬೂಬ್ ಅಲಿಯಾಸ್ ಬಾಡಿ (21) ಎಂದು ಗುರುತಿಸಲಾಗಿದೆ. ಅಪರಿಚಿತ ದುಷ್ಕರ್ಮಿಗಳು ತಡರಾತ್ರಿ ಈ ಕೃತ್ಯ ಎಸಗಿ ಸ್ಥಳದಿಂದ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯ ಮಾಹಿತಿ ಪಡೆದ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಫಾರೆನ್ಸಿಕ್ ತಂಡ ಹಾಗೂ ಶ್ವಾನ ದಳದಿಂದಲೂ ತನಿಖೆ ಕೈಗೊಳ್ಳಲಾಗಿದೆ.
ಮೃತ ಮೆಹಬೂಬ್ ಕೆಲ ಕಳ್ಳತನ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಎನ್ನಲಾಗಿದ್ದು, ಹಳೆಯ ದ್ವೇಷದ ಹಿನ್ನೆಲೆ ಈ ಕೊಲೆ ನಡೆದಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ನನ್ನ ಮಗ ಮನೆಗೆ ಬರುತ್ತಿರಲಿಲ್ಲ. ಯಾವಾಗಲೂ ಹೊರಗಡೆಯೇ ಇರುತ್ತಿದ್ದ, ಬಸ್ ಸ್ಟಾಂಡ್ ಸೇರಿ ಹೊರಗಡೆಯೇ ಆತ ಮಲಗುತ್ತಿದ್ದ, ಈಗ ಮಗನ ಕೊಲೆ ಆಗಿದ್ದು, ನಮ್ಮಗೆ ದಿಗ್ಭ್ರಮೆ ಉಂಟು ಮಾಡಿದೆ ಎಂದು ಮೃತ ಮೆಹಬೂಬ್ ನ ತಂದೆ ಅಳಲು ತೋಡಿಕೊಂಡಿದ್ದಾರೆ.
ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ ತನಿಖೆ ಮುಂದುವರಿಸಿದ್ದಾರೆ.