ಕಲಮಾಲ ಸುಪ್ರೀಯಾ 
ಕಲಬುರಗಿ

ಗುರುಕುಲ ವಿದ್ಯಾರ್ಥಿನಿಯ ಸಾಧನೆ

ಪ್ರಮುಖ ಮುಖ್ಯಾಂಶಗಳು

  • ರಾಜ್ಯ ಮಟ್ಟದ ಕ್ರೀಡಾಕೂಟ
ಕಲಬುರಗಿ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಜಾಜಿ ಫೌಂಡೇಷನ್​ ಗುರುಕುಲ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕಲಮಾಲ ಸುಪ್ರೀಯಾ ಚಿಕ್ಕಮಗಳೂರಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕರಾಟೆಯಲ್ಲಿ ಪ್ರಥಮ ಸ್ಥಾನ ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ.
ಕರಾಟೆ ಅಸೋಶಿಯೇಶನ್​ ಆಫ್​ ಇಂಡಿಯಾ ಬೆಂಗಳೂರಿನಲ್ಲಿ ಆಯೋಜಿಸಿದ್ದ ಕರಾಟೆ ಸ್ಪರ್ಧೆಯಲ್ಲಿ ಕಲಮಾಲ ಸುಪ್ರೀಯಾ ತೃತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ನಿರ್ದೇಶಕ ಮಂಡಳಿ, ಕಾಲೇಜಿನ ಪ್ರಾಂಶುಪಾಲ ರವಿಕುಮಾರ ವಲ್ಲಮಶೆಟ್ಟಿ, ಉಪಪ್ರಾಂಶುಪಾಲ ಮಂಗೇಶಕುಮಾರ ಖಡಕೆ, ವಾಣಿಜ್ಯ ವಿಭಾಗದ ಮುಖ್ಯಸ್ಥ ಸಂಜೀವ ಪಾಟೀಲ ಹರ್ಷ ವ್ಯಕ್ತಪಡಿಸಿ, ಶುಭ ಹಾರೈಸಿದ್ದಾರೆ.