case registered against manikanta rathod
ಕಲಬುರಗಿ: ಸಚಿವ ಪ್ರಿಯಾಂಕ್ ರ್ಖಗೆ ವಿರುದ್ಧ ಅವಹೇಳನಕಾರಿಯಾಗಿ ನಿಂದಿಸಿದ ಆರೋಪದ ಮೇಲೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇತ್ತೀಚೆಗೆ ದಂಡೋತಿ ಗ್ರಾಮದ ಮುರಾಜಿ ದೇಸಾಯಿ ವಸತಿ ಶಾಲೆಯಲ್ಲಿ ಆಹಾರ ಸೇವಿಸಿ ಮಕ್ಕಳು ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಕಂಠ ರಾಠೋಡ್ ವಿನಾಕಾರಣ ಸಚಿವ ಪ್ರಿಯಾಂಕ್ ರ್ಖಗೆ ಅವರನ್ನು ನಿಂದಿಸಿದ್ದು, "ವಸತಿ ಶಾಲೆಯಲ್ಲಿ ಐವತ್ತು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ, ಆಸ್ಪತ್ರೆಯಲ್ಲಿ ಯಾವುದೇ ಸೌಕರ್ಯವಿಲ್ಲ ಎಂದು ಸುಳ್ಳು ಹರಡಿದ್ದಲ್ಲದೇ ವೈಯಕ್ತಿಕವಾಗಿ ನಿಂದನೆ ಮಾಡಿ, ಸುಳ್ಳು ಮಾಹಿತಿ ನೀಡಿ ಸಾರ್ವಜನಿಕವಾಗಿ ಶಾಂತಿ ಕದಡುವಂತೆ ವಿಡಿಯೋ ಹರಿಬಿಟ್ಟಿದ್ದಾರೆ ಎಂದು ಚಿತ್ತಾಪುರ ತಾಲೂಕಿನ ಮಲ್ಲಿಕಾರ್ಜುನ ಕಾಳಗಿ ಎಂಬುವವರು ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.