ಕಲಬುರಗಿ: ಸೋಮವಾರ ಮಜಹರ್ ಆಲಂ ಖಾನ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಪ್ರಸ್ತುತ ಬರಗಾಲ ಪರಿಸ್ಥಿತಿಯಲ್ಲಿ ಸಾರ್ವಜನಿಕ ಕುಡಿಯುವ ನೀರಿಗೆ ಆದ್ಯತೆ ನೀಡುವ ದೃಷ್ಟಿಯಿಂದ ವಾಟರ್ ಸೇಸ್ಗಾಗಿ ಇಡಲಾದ ಮೊತ್ತದಲ್ಲಿ ಕಲಬುರಗಿ ಮಹಾನಗರ ಪಾಲಿಕೆ 1.24 ಕೋಟಿ ರೂ. ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ 67 ಲಕ್ಷ ರೂ. ನೀಡಲು ಸಭೆಯಲ್ಲಿ ಒಮ್ಮತದ ನಿರ್ಣಯ ತೆಗೆದುಕೊಳ್ಳಲಾಗಿದೆ.
ಮುಖ್ಯವಾಗಿ ಕಲಬುರಗಿ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ ಈಗಾಗಲೇ ಪ್ರಾಧಿಕಾರದಲ್ಲಿ ವಾಟರ್ ಸೇಸ್ಗಾಗಿ ಇಡಲಾದ ಮೊತ್ತದಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಶೇ.65ರಷ್ಟು ಮೊತ್ತ 1.24 ಕೋಟಿ ರೂ. ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಶೇ.35ರಷ್ಟು ಮೊತ್ತ 67ಲಕ್ಷ ರೂ. ಗಳನ್ನುವನೀಡಲು ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆಂದು ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್ ತಿಳಿಸಿದ್ದಾರೆ.
ಸಭೆಯಲ್ಲಿ ಕಲಬುರಗಿ ಉತ್ತರ ಶಾಸಕಿ ಕನೀಜ ಫಾತೀಮಾ, ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮುತ್ತಿಮೂಡ, ವಿಧಾನ ಪರಿಷತ್ ಶಾಸಕರುಗಳಾದ ತಿಪ್ಪಣ್ಣಪ್ಪ ಕಮಕನೂರ, ಬಿ.ಜಿ ಪಾಟೀಲ, ಜಗದೇವ ಗುತ್ತೇದಾರ, ಪ್ರಾಧಿಕಾರದ ಆಯುಕ್ತ ಶೈಲೇಂದ್ರ ಸಿಂಗ್ ಸೇರಿದಂತೆ ಇತರೆ ಸದಸ್ಯರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.