ಚಿಂಚೋಳಿ: ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿ ಸಮಸ್ಯೆ ಉಂಟಾದರೇ ತಕ್ಷಣವೇ ಸಹಾಯವಾಣಿ ಕೇಂದ್ರಕ್ಕೆ ಸಂಪರ್ಕಿಸಿ ತಮಸ್ಯೆ ನಮೂದಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷಕುಮಾರ ಚವ್ಹಾಣ ತಿಳಿಸಿದ್ದಾರೆ.
ಈಗಾಗಲೇ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಸಾರ್ವಜನಿಕರು, ಬಿಸಿಲಲ್ಲಿ ಒಡಾಟ ಕಡಿಮೆ ಮಾಡಬೇಕು. ಪಟ್ಟಣದ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ನೀರಿಗಾಗಿ ಸಹಾಯವಾಣಿ ಪ್ರಾರಂಭಿಲಾಗಿದ್ದು, ಚಂದ್ರಕಾಂತ ಕೇರಳ್ಳಿ ದೂ. ಸಂಖ್ಯೆ 8971948821, ಹಾಗೂ ಮಧುರವಾಣಿ ದೂ. ಸಂಖ್ಯೆ 8861681728ಗೆ ಸಂಪರ್ಕಿಸಿ ನೀರಿನ ಸಮಸ್ಯೆಯ ಕುರಿತು ಮಾಹಿತಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.