Suresh Guttedar 
ಕಲಬುರಗಿ

ಕೆಕೆಆರ್​ಡಿಬಿಗೆ ಜಗದೇವ ಗುತ್ತೇದಾರ್​ ಅಧ್ಯಕ್ಷರಾಗಲಿ

ವಿಜಯವಾಣಿ ಸುದ್ದಿಜಾಲ ಚಿಂಚೋಳಿ
ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಹಾಗೂ ಹಾಲಿ ವಿಧಾನ ಪರಿಷತ್​ ಸದಸ್ಯ ಜಗದೇವ ಗುತ್ತೇದಾರ್​ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕು ಎಂದು ಈಡಿಗ ಸಮಾಜದ ಯುವ ಘಟಕದ ತಾಲೂಕು ಅಧ್ಯಕ್ಷ ಸುರೇಶ ಗುತ್ತೇದಾರ್​ ಒತ್ತಾಯಿಸಿದ್ದಾರೆ.

ಜಗದೇವ ಗುತ್ತೇದಾರ್​ ಅವರು ದೀರ್ಘಕಾಲದಿಂದ ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಶ್ರಮಿಸುತ್ತಿದ್ದಾರೆ. ಜಿಲ್ಲಾಧ್ಯಕ್ಷರಾಗಿ ಪಕ್ಷವನ್ನು ಬಲಿಷ್ಠವಾಗಿ ಕಟ್ಟಿದ್ದಾರೆ. ಹಿಂದುಳಿದ ವರ್ಗಗಳ ಹಾಗೂ ಸಮಾಜದ ಎಲ್ಲ ವರ್ಗಗಳ ನಾಯಕರಾಗಿರುವ ಅವರಿಗೆ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪದವಿ ನೀಡುವುದರಿಂದ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹೆಚ್ಚು ವೇಗ ದೊರೆಯಲಿದೆ ಎಂದು ಮನವಿ ಮಾಡಿದ್ದಾರೆ.