ಮತ ಎಣಿಕೆ 
ಕಲಬುರಗಿ

ಈಶಾನ್ಯ ಶಿಕ್ಷಕರ ಕ್ಷೇತ್ರ: ಮತಪತ್ರಗಳ ಬಂಡ್ಲಿಂಗ್ ಪೂರ್ಣ: ಮತ ಎಣಿಕೆ ಶುರು

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026ರ ಮತ ಎಣಿಕೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಭಾಗದ ಭಾಸ್ಕರ್ ಸಭಾಂಗಣದಲ್ಲಿ ಆರಂಭದಲ್ಲಿ ಬಂಡ್ಲಿಂಗ್ ಕಾರ್ಯ ಪೂರ್ಣಗೊಂಡಿದ್ದು, ಮೂರು ಸುತ್ತಿನ ಮತ ಎಣಿಕೆ ನಡೆಯಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಆರಂಭವಾಗಿದೆ.

ಚುನಾವಣಾ ವೀಕ್ಷಕ ಶಿವಕುಮಾರ ಕೆ.ಬಿ., ಚುನಾವಣಾಧಿಕಾರಿ ಜಹೀರಾ ನಸೀಮ್, ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟ್‌ಗಳ ಸಮ್ಮುಖದಲ್ಲಿ ಸ್ಟ್ರಾಂಗ್‌ರೂಂ ತೆರೆಯಲಾಯಿತು. ಬಳಿಕ 144 ಮತಪೆಟ್ಟಿಗೆಗಳನ್ನು ತೆರೆದು ಮತಪತ್ರಗಳನ್ನು ಬಂಡ್ಲಿಂಗ್ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಮತಪತ್ರಗಳ ಬಂಡ್ಲಿಂಗ್ ಪೂರ್ಣಗೊಂಡ ಬಳಿಕ ಬ್ಯಾರೆಲ್‌ನಲ್ಲಿ ರ್ಯಾಂಡಮೈಜೇಷನ್ ಪ್ರಕ್ರಿಯೆ ನಡೆಯಿತು. ಈ ಪ್ರಕ್ರಿಯೆ ಮುಗಿದ ನಂತರ ಪ್ರಥಮ ಪ್ರಾಶಸ್ತ್ಯದ ಮತಗಳ ಎಣಿಕೆ ಆರಂಭವಾಯಿತು.

ಕ್ಷೇತ್ರದಲ್ಲಿ ಒಟ್ಟು 13 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್‌ನಿಂದ ಶರಣಪ್ಪ ಮಟ್ಟೂರ, ಬಿಜೆಪಿಯಿಂದ ಶಶೀಲ್ ಜಿ. ನಮೋಶಿ, ಆಮ್ ಆದ್ಮಿ ಪಕ್ಷದಿಂದ ಸಾಯಬಣ್ಣಾ ಹಾಗೂ ಜನತಾ ದಳ (ಸಂಯುಕ್ತ) ಪಕ್ಷದಿಂದ ಶಂಕರೆಡ್ಡಿ ಪಾಟೀಲ್ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.