ಡಾ.ಅಜಯಸಿಂಗ್​ 
ಕಲಬುರಗಿ

ಜನರ ಪ್ರಶ್ನೆಗೆ ಆಯೋಗ ಉತ್ತರಿಸಲಿ

ಕಲಬುರಗಿ: ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಮತ್ತು ನಿರ್ಧಾರ ಪ್ರಕ್ರಿಯೆ ಕುರಿತು ಸಾರ್ವಜನಿಕ ವಲಯದಲ್ಲಿ ಗಂಭೀರ ಪ್ರಶ್ನೆಗಳು ಎದ್ದಿವೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ಅವರು ಜನತೆಗೆ ಸ್ಪಷ್ಟ ಉತ್ತರ ನೀಡಬೇಕು ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಜಯ ಧರ್ಮಸಿಂಗ್​ ಆಗ್ರಹಿಸಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸೋಮವಾರ ಮಾತನಾಡಿ, ಚುನಾವಣಾ ಆಯೋಗದಂತಹ ಸಂವಿಧಾನಾತ್ಮಕ ಸಂಸ್ಥೆಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ, ಒಮ್ಮತ ಮತ್ತು ಸಾರ್ವಜನಿಕ ವಿಶ್ವಾಸ ಅತ್ಯಂತ ಮುಖ್ಯ. ಇದು ಯಾವುದೋ ಒಂದು ಪದ ಪ್ರಶ್ನೆಯಾಗಿ ಉಳಿದಿಲ್ಲ. ಚುನಾವಣಾ ಪ್ರಕ್ರಿಯೆಯ ಮೇಲಿನ ವಿಶ್ವಾಸಕ್ಕೆ ಸಂಬಂಧಿಸಿದ ವಿಷಯವಾಗಿದೆ. ಇತ್ತೀಚಿನ ಮಾಧ್ಯಮ ವರದಿ, ಚುನಾವಣಾ ಆಯೋಗದ ಇಬ್ಬರು ಸದಸ್ಯರು ಕೆಲವು ಕ್ರಮಗಳ ಕುರಿತು ಆೇಪ ದಾಖಲಿಸಿದ್ದರೆಂದು ಹೇಳಿವೆ. ಆದರೆ ಚುನಾವಣಾ ಆಯೋಗವು ಅಂತಿಮ ನಿರ್ಧಾರಗಳು ಪೂರ್ಣ ಆಯೋಗದ ಏಕಮತದ ತೀರ್ಮಾನಗಳಾಗಿವೆ. ಆಂತರಿಕ ಭಿನ್ನಾಭಿಪ್ರಾಯಗಳು ಚರ್ಚಾ ಪ್ರಕ್ರಿಯೆಯ ಭಾಗವೆಂದು ಸ್ಪಷ್ಟಪಡಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಸಂಸ್ಥೆಯೂ ಪ್ರಶ್ನೆಗಳಿಗೆ ಮೀರಿದುದಲ್ಲ. ಜನರು ಕೇಳುತ್ತಿರುವ ಪ್ರಶ್ನೆಗಳಿಗೆ ಉತ್ತರ ಸಿಗಬೇಕು ಮತ್ತು ಚುನಾವಣಾ ಪ್ರಕ್ರಿಯೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಆಯೋಗ ನಡೆದುಕೊಳ್ಳಬೇಕು. ಪ್ರಸ್ತುತ ಉದ್ಭವಿಸಿರುವ ವಿವಾದಗಳ ಹಿನ್ನೆಲೆ ಮುಖ್ಯ ಚುನಾವಣಾ ಆಯುಕ್ತ ಾನೇಶಕುಮಾರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.