ಕಲಬುರಗಿ ಶರಣಬಸವ ವಿಶ್ವವಿದ್ಯಾಲಯದ ಪೂಜ್ಯ ದೊಡ್ಡಪ್ಪ ಅಪ್ಪ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಪೋಕ್ಸೋ ಕಾಯ್ದೆ ಹಾಗೂ ಮಾದಕ ದ್ರವ್ಯ ವ್ಯಸನಮುಕ್ತ ಜಾಗೃತಿ ಕಾರ್ಯಕ್ರಮಕ್ಕೆ ನ್ಯಾಯಾಧೀಶ ಜಿ.ಎಲ್.ಲಕ್ಷಿö್ಮÃನಾರಾಯಣ ಚಾಲನೆ ನೀಡಿದರು. ಶ್ರೀನಿವಾಸ ನವಲೆ, ಬಸವರಾಜ ದೇಶಮುಖ, ಮಂಜುಳಾ ಪಾಟೀಲ್, ಬಾಲಸುಬ್ರಮಣಿ, ಮೋಹನ್ ನಲವಾಡೆ, ವಿಶ್ವಾರಾಧ್ಯ ಇಜೇರಿ ಇತರರಿದ್ದರು.
- ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಲಕ್ಷಿö್ಮÃನಾರಾಯಣ ಕರೆ
- ಮಾದಕ ದ್ರವ್ಯ ವ್ಯಸನಮುಕ್ತ ಜಾಗೃತಿ ಕಾರ್ಯಕ್ರಮ
ಕಲಬುರಗಿ: ಇಂದಿನ ಯುವಜನತೆ ಹೆತ್ತವರ ನಿರೀಕ್ಷೆ ಈಡೇರಿಸುವಂತೆ ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಕುಟುಂಬ, ಸಮಾಜ ಹಾಗೂ ದೇಶಕ್ಕೆ ಕೀರ್ತಿ ತರಬೇಕು. ಮಾದಕ ವ್ಯಸನ ಮತ್ತು ಲೈಂಗಿಕ ದೌರ್ಜನ್ಯದಂತಹ ಸಾಮಾಜಿಕ ಪಿಡುಗುಗಳಿಂದ ದೂರವಿದ್ದು, ಕಾನೂನು ಅರಿವಿನೊಂದಿಗೆ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಎಲ್.ಲಕ್ಷಿö್ಮÃನಾರಾಯಣ ಕರೆ ನೀಡಿದರು.
ನಗರದ ಶರಣಬಸವ ವಿಶ್ವವಿದ್ಯಾಲಯದ ಪೂಜ್ಯ ದೊಡ್ಡಪ್ಪ ಅಪ್ಪ ಸಭಾಂಗಣದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಪೋಕ್ಸೋ ಕಾಯ್ದೆ ಹಾಗೂ ಮಾದಕ ದ್ರವ್ಯ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಭಾಗಗಳಲ್ಲಿ ಚಿಕ್ಕ ವಯಸ್ಸಿನಲ್ಲೇ ಮದ್ಯ, ಗಾಂಜಾ ಹಾಗೂ ತಂಬಾಕು ಸೇವನೆಯಂತಹ ದುಶ್ಚಟಗಳಿಗೆ ಯುವಕರು ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಇಂತಹ ದುಶ್ಚಟಗಳಿಂದ ಕ್ಯಾನ್ಸರ್ ಸೇರಿ ಮಾರಕ ಕಾಯಿಲೆ ಉಂಟಾಗುತ್ತಿದ್ದು, ಅಮೂಲ್ಯ ಜೀವಗಳು ಬಲಿಯಾಗುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು.
ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಜಿಲ್ಲಾ ನ್ಯಾಯಾಧೀಶ ಶಶಿಧರ ಶೆಟ್ಟಿ ಹೆಚ್. ಮಾತನಾಡಿ, ಕಾನೂನು ಅರಿವು ಕೇವಲ ಅನಕ್ಷರಸ್ಥರಿಗಷ್ಟೇ ಸೀಮಿತವಾಗಿರದೆ ವಿದ್ಯಾವಂತರಿಗೂ ಅಗತ್ಯವಾಗಿದೆ. ಜನ್ಮ ಪ್ರಮಾಣಪತ್ರ, ಚಾಲನಾ ಪರವಾನಗಿ, ರಸ್ತೆ ಸುರಕ್ಷತೆ ಸೇರಿ ದೈನಂದಿನ ಬದುಕಿಗೆ ಸಂಬAಧಿಸಿದ ಮೂಲಭೂತ ಕಾನೂನುಗಳ ಅರಿವು ಪ್ರತಿಯೊಬ್ಬರಿಗೂ ಇರಬೇಕು ಎಂದರು.
೧೮ ವರ್ಷದೊಳಗಿನ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಪೋಕ್ಸೋ ಕಾಯ್ದೆ ಪರಿಣಾಮಕಾರಿ ಸಾಧನ. ಮಕ್ಕಳು ತಮ್ಮ ಹಕ್ಕುಗಳ ಉಲ್ಲಂಘನೆಯಾದಾಗ ಧೈರ್ಯದಿಂದ ವಿರೋಧಿಸಬೇಕು. ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ಅಥವಾ ಮಕ್ಕಳ ಮೇಲಿನ ಯಾವುದೇ ದೌರ್ಜನ್ಯ ಪ್ರಕರಣ ಕಂಡುಬAದಲ್ಲಿ ಮಕ್ಕಳ ಸಹಾಯವಾಣಿ ೧೦೯೮ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.
ದೇಶದಲ್ಲಿ ಮಾದಕ ವಸ್ತುಗಳ ಜಾಲ ದಿನದಿಂದ ದಿನಕ್ಕೆ ವಿಸ್ತರಿಸುತ್ತಿದ್ದು, ಗಡಿಯಾಚೆಗಿನ ಕಳ್ಳಸಾಗಣೆ ಮೂಲಕ ಭಾರತವನ್ನು ದೊಡ್ಡ ಮಾರುಕಟ್ಟೆಯನ್ನಾಗಿ ಮಾಡಲು ಸಂಚು ರೂಪಿಸಲಾಗುತ್ತಿದೆ. ಮಾದಕ ವಸ್ತುಗಳ ಸಾಗಾಟ ಅಥವಾ ಮಾರಾಟದ ಬಗ್ಗೆ ಮಾಹಿತಿ ದೊರೆತರೆ ಸಾರ್ವಜನಿಕರು ತಕ್ಷಣ ೧೯೩೩ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿ ಸಮಾಜದ ರಕ್ಷಣೆಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕಾನೂನು ಅರಿವು ಬೆಳೆಸಿಕೊಳ್ಳಬೇಕು. ಎಸ್ಸೆಸ್ಸೆಲ್ಸಿ ನಂತರದ ಎರಡು ವರ್ಷಗಳು ಜೀವನದ ಅತ್ಯಂತ ಮಹತ್ವದ ಹಂತವಾಗಿದ್ದು, ಸ್ಪಷ್ಟ ಗುರಿಯೊಂದಿಗೆ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ನಾಗರಿಕರಾಗಿ ಬೆಳೆಯಬೇಕು ಎಂದು ಹೇಳಿದರು.
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಾರ್ವಜನಿಕ ಸಂಪರ್ಕ ಅಧಿಕಾರಿ ಬಾಲಸುಬ್ರಮಣಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ, ಮಾನವ ಹಕ್ಕುಗಳ ರಕ್ಷಣಾ ಸಂಸ್ಥೆಯ ಸದಸ್ಯ ಮೋಹನ್ ನಲವಾಡೆ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ವಿಶ್ವಾರಾಧ್ಯ ಇಜೇರಿ ಇತರರಿದ್ದರು.
ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಮಂಜುಳಾ ಬಿ. ಪಾಟೀಲ್ ಪ್ರಾಸ್ತಾವಿಕ ಮಾತನಾಡಿದರು. ಮಂಜುಳಾದೇವಿ ರೆಡ್ಡಿ ನಿರೂಪಿಸಿದರು. ಭರತೇಶ್ ಶೀಲವಂತ ವಂದಿಸಿದರು.
"
೨೦೧೨ರ ನಿರ್ಭಯ ಪ್ರಕರಣದ ಬಳಿಕ ಮಹಿಳೆಯರು ಹಾಗೂ ಮಕ್ಕಳ ರಕ್ಷಣೆಗಾಗಿ ಪೋಕ್ಸೋ ಕಾಯ್ದೆ ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳು ದುರಾಲೋಚನೆಗಳಿಗೆ ಬಲಿಯಾಗದೆ ಶಿಕ್ಷಣದತ್ತ ಹೆಚ್ಚಿನ ಗಮನ ಹರಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು.
ಜಿ.ಎಲ್.ಲಕ್ಷಿö್ಮÃನಾರಾಯಣ,ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ.