ಮಹಾಲಕ್ಷ್ಮೀ ಪ್ರತಿಷ್ಠಾಪನೋತ್ಸವ
ಕಲಬುರಗಿ: ಸುಲ್ತಾನಪುರ ರಸ್ತೆಯಲ್ಲಿರುವ ವಿಜಯನಗರ ಕಾಲನಿಯ ಶ್ರೀ ಮಹಾಲಕ್ಷಿ$್ಮ ದೇವಸ್ಥಾನದ 11ನೇ ವರ್ಷದ ಪ್ರತಿಷ್ಠಾಪನಾ ಸಮಾರಂಭ ಶುಕ್ರವಾರ ನಡೆಯಿತು. ಬೆಳಗ್ಗೆಯಿಂದಲೇ ವಿಶೇಷ ಪೂಜೆ, ಅಭಿಷೇಕ ನಡೆಯಿತು. ನಂತರ ಮಹಾಪ್ರಸಾದ ವಿತರಿಸಲಾಯಿತು.
ವೇದಿಕೆ ಕಾರ್ಯಕ್ರಮದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್ ಮಾತನಾಡಿ, ಧಾರ್ಮಿಕ ಕಾರ್ಯಕ್ರಮಗಳು ಹೆಚ್ಚಿನ ಸಂಖ್ಯೆಯಲ್ಲಿ ನಿರಂತರವಾಗಿ ನಡೆಯುತ್ತಿರಲಿ. ವಿಜಯನಗರ ಕಾಲನಿಯ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು. ನಿರಗುಡಿಯ ಶ್ರೀ ಹವಾ ಮಲ್ಲಿನಾಥ ಮುತ್ಯಾ, ಶ್ರೀನಿವಾಸ ಸರಡಗಿಯ ಶ್ರೀ ಅಪ್ಪಾರಾವ ದೇವಿ ಮುತ್ಯಾ ಸಾನ್ನಿಧ್ಯ ವಹಿಸಿದ್ದರು.
ವಿಜಯನಗರ ಕಾಲನಿಯಲ್ಲಿ ಸೂಕ್ತ ರಸ್ತೆಗಳನ್ನು, ಒಳಚರಂಡಿ ಮತ್ತು ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಶಾಸಕ ಅಲ್ಲಮಪ್ರಭು ಪಾಟೀಲ್ಗೆ ಮನವಿ ಸಲ್ಲಿಸಲಾಯಿತು. ಕಮಿಟಿ ಅಧ್ಯಕ್ಷ ವಿರುಪಾಕ್ಷಪ್ಪ ತಡಕಲ್ ಇತರರಿದ್ದರು.