Police shootout 
ಕಲಬುರಗಿ

ಕೊಲೆ ಆರೋಪಿ ಕಾಲಿಗೆ ಗುಂಡೇಟು: ಮೂವರು ಪೊಲೀಸರಿಗೆ ಗಾಯ

ಕಲಬುರಗಿ: ನಗರದಲ್ಲಿ ಏ.2ರಂದು ನಡೆದ ಕೊಲೆ ಪ್ರಕರಣದಲ್ಲಿನ ಆರೋಪಿಯ ಕಾಲಿಗೆ ನಗರ ಪೊಲೀಸರು ಗುಂಡು ಹಾರಿಸಿದ್ದಾರೆ. ಮೂವರು ಪೊಲೀಸ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಆರೋಪಿಗಳನ್ನು ಪತ್ತೆ ಮಾಡಲು ಹೋದಾಗ ಕೇಸರಟಗಿ ಬಳಿ ತಪ್ಪಿಸಿಕೊಂಡು ಹೋಗುತ್ತಿದ್ದು, ಪೊಲೀಸ್ ಸಿಬ್ಬಂದಿ ಮೇಲೆ ವಾಪಸ್ ದಾಳಿ ಮಾಡಿದ್ದಾರೆ. ಈ ವೇಳೆ ಪೊಲೀಸ್ ಇನ್ಸ್ ಪೆಕ್ಟರ್ ಗುರುಲಿಂಗಪ್ಪಗೌಡ ಪಾಟೀಲ್ ಪ್ರತಿದಾಳಿ ನಡೆಸಿ ಅನೀಲ ರಾಠೋಡ್ ಎಡಗಾಲಿಗೆ ಗುಂಡು ಹೊಡೆದಿದ್ದಾರೆ.