cockroach janata party 
ಕಲಬುರಗಿ

ವಿದ್ಯಾರ್ಥಿಗಳ ಮೇಲೆ ಪೊಲೀಸ್‌ ದೌರ್ಜನ್ಯಕ್ಕೆ ಆನಂದ ನಂದೂರಕರ್​ ಕಿಡಿ

ಕಲಬುರಗಿ: ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್‌ ದೌರ್ಜನ್ಯಕ್ಕೆ ಖಂಡನೀಯ. ಕೂಡಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಕಲಬುರಗಿ ದಕ್ಷಿಣ ಕಾಂಗ್ರೆಸ್​ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಆನಂದ ನಂದೂರಕರ್ ಆಗ್ರಹಿಸಿದ್ದಾರೆ.
ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಸಾಲುಸಾಲು ಪರೀಕ್ಷಾ ಅಕ್ರಮ ನಡೆಯುತ್ತಿವೆ. ನೀಟ್ ಪರೀಕ್ಷೆಯನ್ನು ಸೂಕ್ತ ರೀತಿಯಲ್ಲಿ ಕೇಂದ್ರ ಸರ್ಕಾರ ಮಾಡಿಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆಗೆ ಕೇಂದ್ರವೇ ಹೊಣೆ. ಇದರಿಂದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡುವಂತೆ ಕಾಕ್ರೋಚ್ ಪಕ್ಷ, ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ಮಾಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ಸಾಮಾಜಿಕ ಹೋರಾಟಗಾರ ಸೋನ್ಂ ವಾಂಗ್ಚುಕ್ ಹಾಗೂ ಹೋರಾಟಗಾರರ ಮೇಲೆ ಪೊಲೀಸರ ಜತೆ ಕೆಲ ಗೊಂಡಾಗಳನ್ನು ಬಿಟ್ಟು ಮನಬಂದಂತೆ ಥಳಿಸಿ, ಗಾಯಗೊಳಿಸಿದ್ದಾರೆ ಇದು ಖಂಡನೀಯ. ಯುವಜನತೆ, ವಿದ್ಯಾರ್ಥಿಗಳ ಮೇಲಿನ ಲಾಠಿ ಪ್ರಹಾರವನ್ನು ಒಪ್ಪುವುದಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಶಿಕ್ಷಣ ಸಚಿವ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.