ಚಿಂಚೋಳಿ: ರಾಜ್ಯದಲ್ಲಿ ನೂತನ ಮುಖ್ಯಮಂತ್ರಿ ಹಾಗೂ ಮಂತ್ರಿಮಂಡಲ ರಚನೆಯಾಗುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೇಸ್ ಪಕ್ಷದ ಸಂಸದರು, ಶಾಸಕರು ಹೆಚ್ಚಾಗಿದ್ದು, ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ಉಪಮುಖ್ಯಮಂತ್ರಿ ಮಾಡಬೇಕು. ಅಜಯಸಿಂಗ್ ಅವರಿಗೆ ಸಚಿವ ಸ್ಥಾನ ಕಲ್ಪಿಸಬೇಕು. ಶರಣಪ್ರಕಾಶ ಪಾಟೀಲ್ ಅವರಿಗೆ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಗೊಳಿಸುವ ಮೂಲಕ ಕಲ್ಯಾಣ ಕರ್ನಾಟಕಕ್ಕೆ ಸೂಕ್ತ ಸ್ಥಾನಮಾನ ಕಲ್ಪಿಸಿ ಪಕ್ಷದ ಬಲವರ್ದನೆಗೆ ಆದ್ಯತೆ ನೀಡಬೇಕು ಎಂದು ಜಿಪಂ ಮಾಜಿ ಅಧ್ಯಕ್ಷ ದೀಪಕನಾಗ ಪುಣ್ಯಶೆಟ್ಟಿ ಒತ್ತಾಯಿಸಿದರು.
ಚಿಂಚೋಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿಗೆ ಸ್ಪಂದಿಸಬೇಕು ಎಂದು ಹೇಳಿದರು.
ಪ್ರಮುಖರಾದ ವೀರಶೇಟ್ಟಿ ಪಾಟೀಲ್, ಅಲ್ಲಾವುದ್ದೀನ್ ಅನ್ಸಾರಿ, ದಿನೇಶ ದುಗ್ಗಾಣಿ, ಶಿವಕುಮಾರ ಮೂಲಗಿ, ಶಿವಾಜಿ ರಾಠೋಡ, ರಾಜು ಮಂದಾ, ಶರಣು ಪಪ್ಪಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.