Rape 
ಕಲಬುರಗಿ

ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಕಲಬುರಗಿ: ನಾಲ್ಕು ರ‍್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಟನೆ ನಗರ ಪೊಲೀಸ್​ ವ್ಯಾಪ್ತಿಯಲ್ಲಿ ಗುರುವಾರ ಸಂಭವಿಸಿದೆ. ಬಾಲಕಿ ಮಾನಸಿಕ ಅಸ್ವಸ್ಥಳಾಗಿದ್ದು, ತಾಯಿಯೊಂದಿಗೆ ವಾಸಿಸುತ್ತಿದ್ದಳು. ಆದರೆ ತಾಯಿ ಮನೆಯಲ್ಲಿ ಇಲ್ಲದಿದ್ದಾಗ ಟನೆ ನಡೆದಿದೆ ಎನ್ನಲಾಗಿದೆ. ಬಾಲಕಿಗೆ ಗಾಯಗಳಾಗಿವೆ ಎಂದು ತಾಯಿ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ತಪಾಸಣೆ ನಡೆಸಿದಾಗ ಅತ್ಯಾಚಾರ ನಡೆದಿರುವುದು ದೃಢೀಕರಿಸಿ, ಎಂಎಲ್​ಸಿ ದೂರು ನೀಡಿದ್ದು, ಮಹಿಳಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅತ್ಯಾಚಾರಿಯ ಪತ್ತೆಗೆ ತಂಡವನ್ನು ರಚಿಸಲಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸರ‍್ವಜನಿಕರಿಂದ ಪ್ರತಿಭಟನೆ: ಬಡ ಕುಟುಂಬದ ನಾಲ್ಕು ರ‍್ಷದ ಬಾಲಕಿಯ ಮೇಲೆ ಅತ್ಯಾಚಾರ ಟನೆಯೂ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದ್ದು, ಕೂಡಲೇ ಅತ್ಯಾಚಾರಿಯನ್ನು ಬಂಧಿಸಿ ಜೈಲಿಗಟ್ಟಿ, ಕಠಿಣ ಶಿೆ ವಿಧಿಸಬೇಕು ಎಂದು ಆಗ್ರಹಿಸಿ ನಗರದ ನ್ಯಾಷನಲ್​ ಚೌಕ್​ ಬಳಿ ಸರ‍್ವಜನಿಕರು ಶುಕ್ರವಾರ ಬೃಹತ್​ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
ಸಂತ್ರಸ್ತೆ ಕುಟುಂಬದ ವಿಳಾಸ, ಮಾಹಿತಿ, ಹೆಸರು ಬಹಿರಂಗಪಡಿಸಬಾರದು ಎಂದು ಕಟ್ಟುನಿಟ್ಟಿನ ನಿಯಮವಿದ್ದರೂ ಸಹ ಕೆಲವು ಡಿಜಿಟಲ್​ ಪ್ಲಾಟ್​ಾಮ್ರ‍್ಗಳಲ್ಲಿ ಸಂತ್ರಸ್ತೆ ಇರುವ ವಿಡಿಯೋ, ಮನೆಗೆ ಪೊಲೀಸರು ಭೇಟಿ ನೀಡುವ ದೃಶ್ಯವನ್ನು ಹಂಚಿಕೊಂಡಿದ್ದು, ಗಂಭೀರ ಅಪರಾಧ ಎಂದು ನ್ಯಾಯವಾದಿಗಳು ತಿಳಿಸಿದ್ದು, ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.