ಕಲಬುರಗಿ: ಎಸ್ಸೆಸ್ಸೆಲ್ಸಿ ಪರೀೆ ಬರೆಯಬೇಕಿದ್ದ ನಗರದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಸಂತೋಷ ಕಾಲನಿಯಿಂದ ಅಜೀತ್ ಎಂಬುವರ ಪುತ್ರಿ ಎಸ್ಸೆಸ್ಸೆಲ್ಸಿ ಹಾಲ್ಟಿಕೆಟ್ ತರುವುದಾಗಿ ಹೇಳಿ ಮನೆಯಿಂದ ಹೋದವಳು ವಾಪಸಾಗಿಲ್ಲ. ಆರ್ಜಿ ನಗರ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿದೆ. ಸ್ಟೇಷನ್ ಬಜಾರ್ ಪ್ರದೇಶದ ಸುಜಾತಾ ಅವರ ಪುತ್ರಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ರಾತ್ರೋರಾತ್ರಿ ಮನೆಯಿಂದ ನಾಪತ್ತೆಯಾಗಿದ್ದು, ಸ್ಟೇಷನ್ ಬಜಾರ್ ಠಾಣೆಯಲ್ಲಿ ಪೊಲೀಸ್ ಪ್ರಕರಣ ದಾಖಲಾಗಿದೆ.