ಕಲಬುರಗಿ: ನಾಡಿನ ನಂಬರ್ 1 ಕನ್ನಡ ದಿನಪತ್ರಿಕೆ ವಿಜಯವಾಣಿ ಸಹಯೋಗದಲ್ಲಿ ಏರ್ಪಡಿಸಿದ್ದ ವಿದ್ಯೋತ್ಸವ ಶಿಕ್ಷಣ ಮೇಳಕ್ಕೆ ಗುರುವಾರ ಅದ್ಧೂರಿ ಚಾಲನೆ ದೊರಕಿದ್ದು, ನಾಡಿನ ಪೂಜ್ಯರು, ಗಣ್ಯರು ಚಾಲನೆ ನೀಡಿದರು.
ಕಲಬುರಗಿ ಸೇರಿದಂತೆ ರಾಜ್ಯದ 30ಕ್ಕಿಂತ ಹೆಚ್ಚಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಭಾಗವಹಿಸಿದ ಮೇಳದಲ್ಲಿ ಮೂರು ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿ, ಜ್ಞಾನ ಪಡೆದರು.
ಅಗಸ್ತ್ಯ ಫೌಂಡೇಶನ್ ನಿಂದ ವಿಜ್ಞಾನ ಪ್ರದರ್ಶನ ಗಮನ ಸೆಳೆಯಿತು.
ಭಾಲ್ಕಿರ ಶ್ರೀ ಗುರುಬಸವ ಪಟ್ಟದ್ದೇವರು ಸಾನ್ನಿಧ್ಯ ವಹಿಸಿದ್ದರು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಚಾಲನೆ ನೀಡಿದರು. ಬಿಜೆಪಿ ನಗರಾಧ್ಯಕ್ಷ ಚಂದು ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ನಗರ ಪೊಲೀಸ್ ಆಯುಕ್ತರಾದ ಡಾ.ಶರಣಪ್ಪ ಎಸ್.ಡಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಶಿವಾನಂದ ಖಜೂರಿ, ನಿತಿನ್ ನಾಯ್ಕ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.