ಜಿಲ್ಲೆ

ಕಾಳಗಿ: ಜನರ ಸಮಸ್ಯೆಗೆ ಸರಿಯಾಗಿ ಸ್ಪಂದಿಸಿ

ಕೃಷ್ಣ ಕುಲಕರ್ಣಿ

ಕಾಳಗಿ: ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತ ಕೆಲಸ ಮಾಡಬೇಕು. ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನು ತಲುಪಿಸುವ ಕಾರ್ಯ ಪ್ರಾಮಾಣಿಕವಾಗಿ ಮಾಡುವಂತೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬಂಜಾರ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ `ಚಿಂತನ ಶಿಬಿರ' ಸಮಾಲೋಚನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಅವರು, ನೂತನ ತಾಲೂಕು ಕೇಂದ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಇಲಾಖಾವಾರು ಕೆಲಸ ಅಚ್ಚುಕಟ್ಟಾಗಿ ನಡೆಯಬೇಕು. ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವ ಕೆಲಸವಾಗಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭನ್ವರ್‌ಸಿಂಗ್ ಮೀನಾ, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ತಹಸೀಲ್ದಾರ್ ಘಮಾವತಿ, ತಾಪಂ ಇಒ ವಿಲಾಸರಾಜ, ಪ್ರಮುಖರಾದ ಮಂಜುನಾಥ ಮಹಾರುದ್ರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವೆಂಕಟೇಶ ತೆಲಂಗ, ಪ್ರಮುಖರಾದ ಗಂಗಾಧರ ವಿಶ್ವಕರ್ಮ, ಮಹೇಶರಡ್ಡಿ ರಾಜಾಪುರ, ಪ್ರಭು ಬಾವಿ ಗೊಟೂರ, ಚಂದ್ರಶೇಖರ ಹರಸೂರ ಇತರರಿದ್ದರು.

ಕಾಳಗಿಯಲ್ಲಿ ವಿವಿಧ ಇಲಾಖೆ ಯೋಜನೆಗಳನ್ನು ಸಮರ್ಪಕ ಅನುಷ್ಠಾನಗೊಳಿಸಬೇಕು. ಮಹಿಳಾ ಶೌಚಗೃಹ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಎಲ್ಲೆಡೆ ಸ್ವಚ್ಛತೆ ಕಾಪಾಡಬೇಕು. ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಿಸಬೇಕು. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಜನರ ಸಮಸ್ಯೆಗೆ ಸ್ಪಂದಿಸಬೇಕು.
| ಫೌಜಿಯಾ ತರನ್ನುಮ್, ಜಿಲ್ಲಾಧಿಕಾರಿ