ಉಡುಪಿ: ನಾಡಿಗೆ ಯಕ್ಷಗಾನ ಕಲಾರಂಗ ವಿವಿಧ ಮುಖಗಳಲ್ಲಿ ನೀಡುತ್ತಿರುವ ಸೇವೆ ಅಪೂರ್ವವಾಗಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಂಡು ಸಮಾಜಕ್ಕೆ ಆಸ್ತಿಯಾಗಬೇಕೆಂದು ಗುರುನರಸಿಂಹ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಡಾ. ಕೆ. ಆರ್. ಕಾರಂತ ಹೇಳಿದರು.
ಮಂಗಳವಾರ ಸಾಲಿಗ್ರಾಮ ದೇವಳದ ಜ್ಞಾನ ಮಂದಿರದಲ್ಲಿ ಯಕ್ಷಗಾನ ಕಲಾರಂಗದ ಅಂಗ ಸಂಸ್ಥೆ ವಿದ್ಯಾಪೋಷಕ್‌ನ ದ್ವಿತೀಯ ಪಿ.ಯು.ಸಿ. ಮುಗಿಸಿದ ವಿದ್ಯಾರ್ಥಿಗಳಿಗೆ ನಡೆದ ಒಂದು ದಿನದ ಶೈಕ್ಷಣಿಕ ಸಮಾಲೋಚನಾ ಶಿಬಿರದಲ್ಲಿ ಅವರು ಮಾತನಾಡಿದರು.
ದೇವಳದ ವ್ಯವಸ್ಥಾಪಕ ಎಚ್. ನಾಗರಾಜ್ ಹಂದೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹುಬ್ಬಳ್ಳಿಯ ಮೈ ಲೈಫ್ ಮುಖ್ಯಸ್ಥರಾದ ಪ್ರವೀಣ್ ಗುಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಸಿಇಟಿ ಮತ್ತು ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಡಾ. ಶ್ರುತಕೀರ್ತಿ ವಿವಿಧ ಕೋರ್ಸ್‌ಗಳ ಬಗ್ಗೆ ಮಾಹಿತಿ ನೀಡಿದರು. ಸಿ.ಎ. ಮಾಡಲು ಸಂಕಲ್ಪಿಸಿದ ವಿದ್ಯಾರ್ಥಿಗಳಿಗೆ ಸಿ.ಎ. ಪ್ರದೀಪ ಜೋಗಿ ಸಲಹೆ ನೀಡಿದರು.
ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಉಪಾಧ್ಯಕ್ಷರಾದ ಎಸ್.ವಿ.ಭಟ್, ಪಿ.ಕಿಶನ್ ಹೆಗಡೆ, ಜೊತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆ, ರಮೇಶ್ ರಾವ್, ಗಣೇಶ್ ಬ್ರಹ್ಮಾವರ, ನರಸಿಂಹ ತುಂಗ, ಕಿಶನ್ ರಾವ್ ಉಪಸ್ಥಿತರಿದ್ದರು. ಶಿಬಿರದಲ್ಲಿ 160 ವಿದ್ಯಾರ್ಥಿಗಳು ಪಾಲ್ಗೊಂಡು ಮುಂದಿನ ಶೈಕ್ಷಣಿಕ ಚಟುವಟಿಕೆಗೆ ಉಪಯುಕ್ತ ಮಾಹಿತಿ ಪಡೆದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.