ಜಿಲ್ಲೆ

ಮಕ್ಕಳಿಗೆ ಖುಷಿ ನೀಡುವ ಹಬ್ಬ: ಫೆಡರಲ್ ಬ್ಯಾಂಕಿನ ವ್ಯವಸ್ಥಾಪಕ ಕಿಶನ್ ಗಾವಂಕರ್ ಹೇಳಿಕೆ

reportermys

ಮಂಡ್ಯ: ಶಾಲೆಯಲ್ಲಿ ಆಯೋಜಿಸಿರುವ ಚಿಣ್ಣರ ಹಬ್ಬಗಳು ವಿದ್ಯಾರ್ಥಿಗಳಿಗೆ ಹೆಚ್ಚಿನ ಖುಷಿ ನೀಡುತ್ತವೆ ಎಂದು ಫೆಡರಲ್ ಬ್ಯಾಂಕಿನ ವ್ಯವಸ್ಥಾಪಕ ಕಿಶನ್ ಗಾವಂಕರ್ ಅಭಿಪ್ರಾಯಪಟ್ಟರು.

ಇಲ್ಲಿನ ಕಾವೇರಿ ನಗರದಲ್ಲಿರುವ ಸದ್ವಿದ್ಯಾ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ್ದ ಮೂರು ದಿನದ ಕಲಾಸಿರಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗಾಗಿ ನೃತ್ಯ ಹಾಗೂ ಇನ್ನಿತರ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಇಂತಹ ಅವಕಾಶವನ್ನು ಬಳಸಿಕೊಂಡು ಸಾಧನೆ ಮಾಡಬೇಕು. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯೂ ಪ್ರಮುಖವಾಗಿದೆ ಎಂದರು.

ಸದ್ವಿದ್ಯಾ ಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷ ಎಂ.ಕೆ.ಹರೀಶ್‌ಕುಮಾರ್ ಮಾತನಾಡಿ, ಸಂಸ್ಥೆಯಲ್ಲಿ ಪ್ರತಿ ವರ್ಷವೂ ಸಹ ಸದ್ವಿದ್ಯಾ ಕಲಾಸಿರಿ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮವನ್ನು ಕೈಗೊಳ್ಳುತ್ತಿದ್ದೇವೆ. ಈ ರೀತಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡುವುದರಿಂದ ಮಕ್ಕಳ ಪ್ರತಿಭೆಯನ್ನು ಹೊರಹಾಕಲು ಉತ್ತಮ ವೇದಿಕೆಯಾಗಿದೆ ಎಂದರು.

ಡಿಡಿಪಿಐ ಎಸ್.ಟಿ.ಜವರೇಗೌಡ ಮತ್ತು ಸದ್ವಿದ್ಯಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರತ್ನಶ್ರೀ ಮಾತನಾಡಿದರು. ಮುಖ್ಯ ಶಿಕ್ಷಕಿ ಬಿ.ಎಸ್.ಗೀತಾ, ಬಿ.ಆರ್.ಶುಭ, ಟ್ರಸ್ಟಿಗಳಾದ ಫಣಿಮಾಲ ಬಿ.ಸುನೀಲ್, ಕೃಷ್ಣಪ್ಪ ಇತರರಿದ್ದರು.