ಹಿಂದು ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಯಲ್ಲಮ್ಮಾ ಮಾತನಾಡಿದರು 
ಜಿಲ್ಲೆ

ಮಕ್ಕಳ ವಿಕಸನಕ್ಕೆ ಪಠ್ಯೇತರ ಚಟುವಟಿಕೆ

ಇಂದಿರಾ ಎನ್ ಕೆ

ಶಿರ್ವ: ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣ ಒದಗಿಸುವುದರ ಜತೆಗೆ ವ್ಯಕ್ತಿತ್ವದ ವಿಕಸನ ಹಾಗೂ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆ ಸಂಘಟಿಸುವ ಅಗತ್ಯವಿದೆ ಎಂದು ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಯಲ್ಲಮ್ಮಾ ಹೇಳಿದರು.

ಶಿರ್ವ ಹಿಂದು ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಹಿಂದು ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ 2024-25ನೇ ಸಾಲಿನ ಕಳತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಾತಮಾಡಿದರು.

ಶಿರ್ವ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಅಧ್ಯಕ್ಷ ಎಸ್. ನಿತ್ಯಾನಂದ ಹೆಗ್ಡೆ ಪ್ರತಿಭಾ ಕಾರಂಜಿ ಉದ್ಘಾಟಿಸಿದರು. ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿ.ಸುಬ್ಬಯ್ಯ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಶಿರ್ವ ವಿದ್ಯಾವರ್ಧಕ ಸಂಘ ಆಡಳಿತಾಧಿಕಾರಿ ಪ್ರೊ.ವೈ.ಭಾಸ್ಕರ ಶೆಟ್ಟಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸುನೀತಾ, ಕಳತ್ತೂರು ಕ್ಲಸ್ಟರ್‌ನ ಸಿಆರ್‌ಪಿ ಸರಿತಾ ರಾಣಿ, ಎಸ್‌ಡಿಎಂಸಿ ಅಧ್ಯಕ್ಷ ಕಿರಣ್, ಹಳೇ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಪತಿ ಕಾಮತ್, ಶಾಲಾ ಶಿಕ್ಷಣ ಸಮಿತಿ ಸದಸ್ಯ ಸಚ್ಚಿದಾನಂದ ಹೆಗ್ಡೆ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶಾಲಿನಿ ಶೆಟ್ಟಿ ಸ್ವಾಗತಿಸಿದರು. ಸಹಶಿಕ್ಷಕಿ ಶಾಲಿನಿ ವಂದಿಸಿದರು. ಶುಭಶ್ರೀ ಕಾರ್ಯಕ್ರಮ ನಿರೂಪಿಸಿದರು.