ಮದ್ದೂರು ಪಟ್ಟಣದ ಗುರುಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಇಒ ಸಿ.ಎಚ್.ಕಾಳೀರಯ್ಯ ಅವರನ್ನು ಅಭಿನಂದಿಸಲಾಯಿತು. ಕೆ.ಎಸ್.ದೇವರಾಜು, ರವೀಶ್, ಪುರುಷೋತ್ತಮ್, ರವೀಶ್, ಮಹದೇವು, ಮಂಜು, ಶಿವರಾಮು, ಲಿಂಗರಾಜು, ತಿಮ್ಮೇಶ್ ಇದ್ದರು.  
ಜಿಲ್ಲೆ

ಶೈಕ್ಷಣಿಕ ಕ್ಷೇತ್ರಕ್ಕೆ ಕಾಳೀರಯ್ಯ ಕೊಡುಗೆ ಅಪಾರ

ಮದ್ದೂರು: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್.ಕಾಳೀರಯ್ಯ ತಮ್ಮ ಅಧಿಕಾರವಧಿಯಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ತಮ್ಮದೆಯಾದ ಕೊಡುಗೆ ನೀಡಿದ್ದಾರೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಸ್.ದೇವರಾಜು ಮೆಚ್ಚುಗೆ ವ್ಯಕ್ತಪಡಿಸಿದರು.

ಬಿಇಒ ಸಿ.ಎಚ್.ಕಾಳೀರಯ್ಯ ಅವರು ನಿವೃತ್ತಿಯಾದ ಹಿನ್ನೆಲೆಯಲ್ಲಿ ತಾಲೂಕಿನ ಶೈಕ್ಷಣಿಕ ಸಂಘಗಳ ವತಿಯಿಂದ ಶುಕ್ರವಾರ ಪಟ್ಟಣದ ಗುರುಭವನದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಸಿ.ಎಚ್.ಕಾಳೀರಯ್ಯ ಅವರು ತಾಲೂಕಿನಲ್ಲಿ 2 ಅವಧಿಯಲ್ಲಿ 6 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸುವ ಮೂಲಕ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಿದ್ದಾರೆ. ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಜತೆಗೆ ಪ್ರಾಮಾಣಿವಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ರವೀಶ್ ಮಾತನಾಡಿ, ಬಿಇಒ ಸಿ.ಎಚ್.ಕಾಳೀರಯ್ಯ ಅವರು ತಮ್ಮ ಅಧಿಕಾರವಧಿಯಲ್ಲಿ ಅತ್ಯುತ್ತಮವಾಗಿ ಕರ್ತವ್ಯ ಸಲ್ಲಿಸಿ ರಾಜ್ಯ ಮಟ್ಟದಲ್ಲಿ ಹೆಸರುಗಳಿಸಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರ ಸಂಘದ ವತಿಯಿಂದ ಬಿಇಒ ಸಿ.ಎಚ್.ಕಾಳೀರಯ್ಯ ಅವರಿಗೆ ಚಿನ್ನದ ಸರವನ್ನು ಉಡುಗೊರೆಯಾಗಿ ನೀಡಿ ದಂಪತಿಯನ್ನು ಅಭಿನಂದಿಸಲಾಯಿತು. ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ರವೀಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರವೀಶ್, ಅಕ್ಷರ ದಾಸೋಹ ಸಹಾಯ ನಿರ್ದೇಶಕಿಯರಾದ ರಾಜೇಶ್ವರಿ, ಮಂಗಳಮ್ಮ, ಪ್ರಾಂಶುಪಾಲ ಪುರುಷೊತ್ತಮ್, ಬಿಇಒ ಮಹದೇವು, ಸಹ ಶಿಕ್ಷಕರ ಅಧ್ಯಕ್ಷ ಮಂಜು ಹಾಗೂ ಶಿವರಾಮು, ಲಿಂಗರಾಜು, ತಿಮ್ಮೇಶ್, ವೈ.ಸಿ.ಪ್ರಸನ್ನ, ಜೋಗಿಗೌಡ ಇದ್ದರು.