ಜಿಲ್ಲೆ

ಒಳ್ಳೆಯದನ್ನು ಗುರುತಿಸುವ ಜವಾಬ್ಧಾರಿ ಪತ್ರಕರ್ತರದು - ವಿವೇಕ ಚೇತನ್ ಕಾರ್ಯಕ್ರಮ ಉದ್ಘಾಟಿಸಿ ಪ್ರಭಾಕರ ಭಟ್ ಕಲ್ಲಡ್ಕ ಸಲಹೆ

Mangaluru - Nishantha Narayana


ಪುತ್ತೂರು: ದೇಶದಲ್ಲಿ ಕಂಡುಬರುವ ಎಲ್ಲಒಳ್ಳೆಯ ವಿಚಾರಗಳನ್ನು ಜಗತ್ತಿಗೆ ಪರಿಚಯಿಸಿ ರಾಷ್ಟçವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಜವಾಬ್ದಾರಿ ಮಾಧ್ಯಮಗಳಿಗಿದೆ. ಪತ್ರಕರ್ತರು ಯಾರ ಪರವಾಗಿಯೂ ನಿಲ್ಲದೆ, ಸತ್ಯಹಾಗೂ ರಾಷ್ಟçದ ಪರ ನಿಲ್ಲಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಪತ್ರಿಕೋದ್ಯಮ ವಿಭಾಗ ಆಯೋಜಿಸಿದ ರಾಷ್ಟçಮಟ್ಟದ ಫೆಸ್ಟ್ *ವಿವೇಕ ಚೇತನ್ 2024' ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ನಟ, ಹಿನ್ನೆಲೆ ಧ್ವನಿ ಕಲಾವಿದ, ಬಿಗ್ ಬಾಸ್ ಧ್ವನಿಯ ಖ್ಯಾತಿಯ ಬಡೆಕ್ಕಿಲ ಪ್ರದೀಪ್ ಮಾತನಾಡಿ ವಿದ್ಯಾರ್ಥಿಗಳು ಪ್ರತಿಯೊಂದು ಕ್ಷೇತ್ರದಲ್ಲಿಯೂ ಹೊಸತ£ ಹುಡುಕಿಕೊಂಡು ಹಾಗೂ ಮೈಗೂಡಿಸಿಕೊಂಡು ಬಾಳುವುದು ಬಹಳ ಮುಖ್ಯ. ಹೊಸ ಅಲೆಯೊಂದಿಗೆ ಹಳೆಯ ವಿಚಾರಗಳನ್ನು ಜೋಡಿಸಿಕೊಂಡು ಅದಕ್ಕೆ ನಾವು ಹೇಗೆ ಹೊಂದಿಕೊಳ್ಳುತ್ತೇವೆ ಎನ್ನುವುದು ಮಹತ್ತರವಾದ ಸಂಗತಿ ಎಂದರು.

ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿ ಕೃಷ್ಣ ಕೆ ಎನ್, ಕಾಲೇಜಿನ ವಿಶೇಷ ಅಽಕಾರಿ ಮತ್ತು ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ನಾಯ್ಕ್, ಪಿಜಿ ವಿಭಾಗದ ಡೀನ್ ಡಾ.ವಿಜಯ ಸರಸ್ವತಿ, ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಶ್ರೀಪ್ರಿಯಾ ಉಪಸ್ಥಿತರಿದ್ದರು.


ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯ ಪಿ ಆರ್ ನಿಡ್ಪಳ್ಳಿ ಸ್ವಾಗತಿಸಿದರು. ಪರೀಕ್ಷಾಂಗ ಕುಲಸಚಿವ ಡಾ.ಶ್ರೀಧರ ಎಚ್.ಜಿ ಪ್ರಾಸ್ತಾವನೆಗೈದರು. ಕಾರ್ಯಕ್ರಮ ಸಂಯೋಜಕ ಶರತ್ ಕೆ.ಎನ್ ವಂದಿಸಿದರು. ಹರಿಪ್ರಸಾದ್ ಈಶ್ವರಮಂಗಲ ಹಾಗೂ ಚೈತ್ರಾ ಭಟ್ ಕಾರ್ಯಕ್ರಮ ನಿರೂಪಿಸಿದರು.


ಸಮಾರೋಪ ಸಮಾರಂಭ:
ಸಮಾರೋಪದಲ್ಲಿ ಆರ್‌ಜೆ ಕಾಜಲ್ ಮಾತನಾಡಿ ನಮ್ಮ ಬಾಳಿನಲ್ಲಿ ನೋವುಂಟು ಮಾಡುವವರು ಹಲವರಿದ್ದಾರೆ. ಆದರೆ ಅದಕ್ಕೆ ದೃತಿಗೆಡದೆ ನಮ್ಮ ಬದುಕಿನಲ್ಲಿ ಬರುವ ಸವಾಲನ್ನು ಸ್ವೀಕರಿಸಿ ಮುಂದುವರೆಯಬೇಕು ಎಂದು ಅಭಿಪ್ರಾಯಪಟ್ಟರು.ವಿವೇಕಾನಂದ ವಿದ್ಯಾವರ್ಧಕ ಸಂಘದ ಕರ‍್ಯದರ್ಶಿ ಡಾ.ಕೃಷ್ಣ ಭಟ್ ಕೆ.ಎಂ. ಅಧ್ಯಕ್ಷತೆ ವಹಿಸಿದ್ದರು. ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಹವ್ಯಾಶ್ರೀ ಪಾಲ್ತಾಡಿ ಸ್ವಾಗತಿಸಿದರು. ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ಸುತನ್ ಕೇವಳ ವಂದಿಸಿದರು. ಅಕ್ಷಯ್ ರೈ ಸಹಕರಿಸಿದರು.

ಪ್ರಶಸ್ತಿ ಪ್ರದಾನ - ಸನ್ಮಾನ:
ವಿವೇಕ ಚೇತನ 2024 ಸ್ಪರ್ಧೆಯ ಸಮಗ್ರ ತಂಡ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜು, ದ್ವಿತೀಯ ರನ್ನರ್ ಪ್ರಶಸ್ತಿಯನ್ನು ಎಸ್‌ಡಿಎಂ ಕಾಲೇಜು ಪಡೆದುಕೊಂಡಿತು. ಪತ್ರಿಕೋದ್ಯಮ ವಿಭಾಗದ ವಿನೂತನ ಪಾಕ್ಷಿಕ ಹಾಗೂ ವಿಕಸನ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಸುಮಾರು 2500ಕ್ಕೂ ಅಽಕ ಹೆರಿಗೆ ಮಾಡಿಸಿದ ಸೂಲಗಿತ್ತಿ ವೆಂಕಮ್ಮ ಮತ್ತು ಸಮಾಜ ಸೇವಕ, ಶ್ವಾನಪ್ರಿಯ ರಾಜೇಶ್ ಬನ್ನೂರು ಅವರನ್ನು ಸನ್ಮಾನಿಸಲಾಯಿತು. ವಿಭಾಗದಲ್ಲಿ ಸಾಧನೆ ಮಾಡಿದ ಶರತ್ ಕೆ.ಎನ್, ದೀಪ್ತಿ ಅಡ್ಡಂತಡ್ಕ, ಜೀವನ್ ಕಲ್ಲೇಗ, ಲಾವಣ್ಯ ಇವರನ್ನು ಗೌರವಿಸಲಾಯಿತು.