ಜಿಲ್ಲೆ

ಗ್ರಾಪಂ ಚುನಾವಣೆ: ಈ ಕ್ಷೇತ್ರಕ್ಕೆ 26 ವರ್ಷದ ಬಳಿಕ ಮತದಾನ, ಮಂಗಳಮುಖಿ ಗೆಲುವು

arunakunigal

ಹೊಸಪೇಟೆ: ಭಾರಿ ಕುತೂಹಲ ಮೂಡಿಸಿದ್ದ ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶ ಇಂದು ಹೊರ ಬಿದ್ದಿದ್ದು, ಮಂಗಳಮುಖಿಗೂ ಮತದಾರರು ಮನ್ನಣೆ ನೀಡಿದ್ದಾರೆ.

ಹೊಸಪೇಟೆ ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿಯ ರಾಜಾಪುರದ ಕ್ಷೇತ್ರದಿಂದ ಮಂಗಳಮುಖಿ ಸುಧಾ ಎಂಬುವವರು ಗೆಲುವಿನ ನಗೆ ಬೀರಿದ್ದಾರೆ.

ಕಲ್ಲಹಳ್ಳಿ ಗ್ರಾಪಂ ಸ್ಥಾಪನೆಯಾಗಿ 26 ವರ್ಷ ಆಗಿದೆ. ಆಗಿನಿಂದಲೂ ಈ ಕ್ಷೇತ್ರದಲ್ಲಿ ಅವಿರೋಧ ಆಯ್ಕೆಯೇ ಆಗುತ್ತಿತ್ತು. ಇದೇ ಮೊದಲ ಬಾರಿಗೆ ಚುನಾವಣೆ ನಡೆದಿದ್ದು, ಮಂಗಳಮುಖಿ ಸುಧಾ ಜಯ ಗಳಿಸಿದ್ದಾರೆ.