ಮೂಡಲಗಿ: ಕಲ್ಲೋಳಿಯ ಶ್ರೀ ಮಹಾಲಕ್ಷ್ಮಿ ಸೌಹಾರ್ದ ಸಹಕಾರಿ ಸಂದ ನೂತನ ಪ್ರಧಾನ ಕಚೇರಿ ಉದ್ಘಾಟನೆ ಸಮಾರಂಭ ಅ.4ರಂದು ಮಧ್ಯಾಹ್ನ 3 ಗಂಟೆಗೆ ರಾಮಲಿಂಗೇಶ್ವರ ಶಿಣ ಸಂಸ್ಥೆಯ ಮೆದಾನದಲ್ಲಿ ಜರುಗಲಿದೆ ಎಂದು ಸಂಸ್ಥಾಪಕ ಅಧ್ಯ ಈರಣ್ಣ ಕಡಾಡಿ ಹೇಳಿದರು.
ತಾಲೂಕಿನ ಕಲ್ಲೋಳಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಸಂಸ್ಥೆ 23 ವರ್ಷಗಳಿಂದ ಸಹಕಾರಿ ರಂಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮಾರ್ಚ್ 31ರವರೆಗೆ ಸಂ 15628 ಷೇರುದಾರರನ್ನು ಹೊಂದಿದೆ. 405.24 ಕೋಟಿ ರೂ. ವ್ಯವಹಾರ ಮಾಡಿ ಪ್ರಗತಿಪಥದಲ್ಲಿ ಸಾಗುತ್ತಿದೆ ಎಂದರು. ಕನ್ಹೇರಿಯ ಕಾಡಸಿದ್ದೇಶ್ವರ ಸ್ವಾಮೀಜಿ, ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಭಗೀರಥ ಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ರೆಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಉದ್ಘಾಟಿಸಲಿದ್ದಾರೆ ಎಂದರು.
ಸಂಸದ ಜಗದೀಶ ಶೆಟ್ಟರ್, ಮಾಜಿ ಸಚಿವರಾದ ಮುರಗೇಶ ನಿರಾಣಿ, ಶಶಿಕಲಾ ಜೊಲ್ಲೆ, ಮಾಜಿ ಸಂಸದರಾದ ಪ್ರಭಾಕರ ಕೋರೆ, ರಮೇಶ ಕತ್ತಿ, ಅಮರಸಿಂಹ ಪಾಟೀಲ, ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಅಭಯ ಪಾಟೀಲ, ದುಯೋರ್ಧನ ಐಹೊಳೆ, ವಿಠ್ಠಲ ಹಲಗೇಕರ, ನಿಖಿಲ್ ಕತ್ತಿ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಮಾಜಿ ಶಾಸಕರಾದ ಸಂಜಯ ಪಾಟೀಲ, ಅನಿಲ ಬೆನಕೆ, ಮಹಾಂತೇಶ ದೊಡಗೌಡರ, ಪಿ.ರಾಜೀವ, ಡಾ.ವಿಶ್ವನಾಥ ಪಾಟೀಲ, ಮಾಜಿ ಎಂಎಲ್ಸಿ ಮಹಾಂತೇಶ ಕವಟಗಿಮಠ, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯ ಜಿ.ನಂಜನಗೌಡ, ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಪಾಟೀಲ ಸೇರಿ ಗಣ್ಯರು ಆಗಮಿಸಲಿದ್ದಾರೆ ಎಂದರು.
ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ, ಸಹಕಾರಿ ಉಪಾಧ್ಯ ಶ್ರೀಶೆಲ ತುಪ್ಪದ, ನಿರ್ದೇಶಕರಾದ ಪರಪ್ಪ ಮಳವಾಡ, ಬಾಳಪ್ಪ ಸಂಗಟಿ, ಸಹದೇವ ಹೆಬ್ಬಾಳ, ಶಿವಪ್ಪ ಗೋಸಬಾಳ, ಅಕ್ಕವ್ವ ಹಡಗಿನಾಳ, ಕಾಶವ್ವ ಹೆಬ್ಬಾಳ, ಮಲ್ಲಿಕಾರ್ಜುನ ಹುಲೆನ್ನವರ, ನಿಂಗಪ್ಪ ಮಿಡಕನಟ್ಟಿ, ಪ್ರಧಾನ ವ್ಯವಸ್ಥಾಪಕ (ಪ್ರಬಾರಿ)ಪರಪ್ಪ ಗಿರೆಣ್ಣವರ ಉಪಸ್ಥಿತರಿದ್ದರು.