ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಹೆಬ್ರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವಕಾರ್ಯಕ್ರಮವನ್ನು ಹೆಬ್ರಿ ಇಒ ಶಶಿಧರ್ ಕೆ.ಜೆ ಉದ್ಘಾಟಿಸಿದರು 
ಜಿಲ್ಲೆ

ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ

ಇಂದಿರಾ ಎನ್ ಕೆ

ಹೆಬ್ರಿ: ಮಕ್ಕಳ ಪ್ರತಿಭೆ ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಉತ್ತಮ ಅವಕಾಶ ಒದಗಿಸುತ್ತದೆ. ಸ್ಪರ್ಧೆಯಲ್ಲಿ ಎಲ್ಲ ವಿದ್ಯಾರ್ಥಿಗಳು ಉತ್ತಮವಾಗಿ ತೊಡಗಿಸಿಕೊಂಡು ಉತ್ಕೃಷ್ಟ ಪ್ರತಿಭೆ ಪ್ರದರ್ಶನ ಮಾಡಿ ಎಂದು ಹೆಬ್ರಿ ಇಒ ಶಶಿಧರ್ ಕೆ.ಜೆ. ಹೇಳಿದರು.

ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಹೆಬ್ರಿ ಕ್ಲಸ್ಟರ್‌ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹೆಬ್ರಿ ಗ್ರಾಪಂ ಅಧ್ಯಕ್ಷ ತಾರಾನಾಥ ಎಸ್.ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಸುಪ್ರಿಯಾ, ಸದಸ್ಯ ಎಚ್.ಜನಾರ್ದನ್, ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷ ಕುಮಾರ್ ಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ತಿಪ್ಪೇಸ್ವಾಮಿ, ಹೆಬ್ರಿ ವೃತ್ತ ಶಿಕ್ಷಣ ಸಂಯೋಜಿಕ ಪ್ರಕಾಶ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಶರತ್ ಶೆಟ್ಟಿ ಸ್ವಾಗತಿಸಿದರು. ಸುಕೇತ ಕಾರ್ಯಕ್ರಮ ನಿರೂಪಿಸಿದರು.