ಸಿರವಾರದಲ್ಲಿ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ರವಿ ಎಸ್.ಅಂಗಡಿ ಮಾತನಾಡಿದರು. ಪಪಂ ಮುಖ್ಯಾಧಿಕಾರಿ ತಿಮ್ಮಪ್ಪ ಜಗ್ಲಿ ಇದ್ದರು. 
ಜಿಲ್ಲೆ

ಕಕ ವಿಮೋಚನಾ ದಿನ ಅರ್ಥಪೂರ್ಣವಾಗಿ ಆಚರಿಸಿ

ಸಿರವಾರ: ಸೆ.17 ರಂದು ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಆವರಣದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಆಚರಿಸಲಾಗುವುದು ಎಂದು ತಹಸೀಲ್ದಾರ್ ರವಿ ಎಸ್.ಅಂಗಡಿ ಹೇಳಿದರು.

ತಾಲೂಕು ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸಿ

ಪಟ್ಟಣದ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಗಳವಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ ಬೆಳಗ್ಗೆ 7 ಕ್ಕೆ ಧ್ವಜಾರೋಹಣ ನೆರವೇರಿಸಬೇಕು. ತಾಲೂಕು ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಹೇಳಿದರು.

ಸಭೆಗೆ ಗೈರಾಗಿದ್ದ ವಿವಿಧ ಇಲಾಖೆಯ ಅಧಿಕಾರಿಗಳನ್ನು ತಹಶೀಲ್ದಾರ್ ೆನ್‌ನಲ್ಲಿ ತರಾಟೆಗೆ ತೆಗೆದುಕೊಂಡರು. ಹೊಸ ತಾಲೂಕು ಕೇಂದ್ರವಾಗಿರುವುದರಿಂದ ಎಲ್ಲಾ ಅಧಿಕಾರಿಗಳು ಮುಂದಿನ ಸಭೆಗಳಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಚ್ಚರಿಕೆ ನೀಡಿದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತಿಮ್ಮಪ್ಪ ಜಗಲಿ, ನೀರಾವರಿ ಇಲಾಖೆಯ ವಿಜಯಲಕ್ಷ್ಮೀ ಪಾಟೀಲ್, ಸಿಡಿಪಿಒ ನಾಗರತ್ನಾ ನಾಯಕ, ವೈದ್ಯಾಧಿಕಾರಿ ಪರಿಮಳಾ ಮೈತ್ರಿ, ಜೆಸ್ಕಾಂ ಎಇಇ ಬನ್ನೆಪ್ಪ ಕರಿಬಂಟನಾಳ ಇನ್ನಿತರರಿದ್ದರು.