ಜಿಲ್ಲೆ

ಚಳ್ಳಕೆರೆಯಲ್ಲಿ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ

ಧನಂಜಯ ಎಸ್.ಹಕಾರಿ.

ಚಳ್ಳಕೆರೆ: ನಗರದ ಕಂಬಳಿ ಮಾರುಕಟ್ಟೆ ಸಭಾಂಗಣದಲ್ಲಿ ತಾಲೂಕು ಆಡಳಿತ, ಶಿಶು ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ನಗರಸಭಾ ಕಾರ್ಯಾಲಯದಿಂದ ಬುಧವಾರ (ಆ.30) ಗೃಹಲಕ್ಷ್ಮೀ ಯೋಜನೆಯ ಅನುಷ್ಠಾನದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸಲಿದ್ದಾರೆ.

ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆ ವಹಿಸಲಿದ್ದು, ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಚಿದಾನಂದಗೌಡ, ಕೆ.ಎಸ್.ನವೀನ್,

ಕಂದಾಯ ಇಲಾಖೆ ಆಯುಕ್ತ ಆಮ್ಲಾನ್ ಆದಿತ್ಯಾ ಬಿಸ್ವಾಸ್, ಜಿಲ್ಲಾಧಿಕಾರಿ ಜೆಆರ್‌ಜೆ ದಿವ್ಯಾಪ್ರಭು, ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ.ಮಂಜುನಾಥ,

ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಜೆ.ರಾಘವೇಂದ್ರ, ಸಿ.ವೀರಭದ್ರಬಾಬು, ಹೇಮಂತರಾಜು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.