ಜಿಲ್ಲೆ

ಶಿವಮೊಗ್ಗದ ಕಾಮಿರ್ಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ರಾಣೆಬೆನ್ನೂರ: ಕಟ್ಟಡ ಕಾಮಿರ್ಕನಾಗಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಿಟ್ಟೂರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಶಿವಮೊಗ್ಗ ತಾಲೂಕಿನ ಪೂರಲೆ ಗ್ರಾಮದ ತೋಟೇಶ ರಾಮಪ್ಪ (36) ಮೃತ ವ್ಯಕ್ತಿ.

ಈತ ತಾಲೂಕಿನ ನಿಟ್ಟೂರ ಗ್ರಾಮದಲ್ಲಿ ಬಂದು ವಾಸವಾಗಿ ಕಟ್ಟಡ ನಿಮಾರ್ಣ ಕಾಮಗಾರಿ ಮಾಡಿಕೊಂಡಿದ್ದ. ಆದರೆ, ಯಾವ ಕಾರಣಕ್ಕೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ಗೊತ್ತಿಲ್ಲ. ಈ ಕುರಿತು ತನಿಖೆ ನಡೆಸುವಂತೆ ಮೃತನ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಈ ಕುರಿತು ಹಲಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.