ಕಂಪ್ಲಿ ತಹಸಿಲ್ ಕಚೇರಿಯಲ್ಲಿ ತಹಸೀಲ್ದಾರ್ ಎಸ್.ಶಿವರಾಜ ಅಧ್ಯಕ್ಷತೆಯಲ್ಲಿ ರಾಜ್ಯೋತ್ಸವ ಪೂರ್ವಭಾವಿ ಸಭೆ ನಡೆಯಿತು. ತಾಪಂ ಇಒ ಆರ್.ಕೆ.ಶ್ರೀಕುಮಾರ್, ಪಿಐ ಕೆ.ಬಿ.ವಾಸುಕುಮಾರ್ ಇದ್ದರು. 
ಜಿಲ್ಲೆ

ಕಂಪ್ಲಿಯಲ್ಲಿ ಭುವನೇಶ್ವರಿ ಭಾವಚಿತ್ರದ ಮೆರವಣಿಗೆ

ರುದ್ರಪ್ಪ ವಾಲಿ

ಕಂಪ್ಲಿ: ಪಟ್ಟಣದ ತಹಸಿಲ್ ಕಚೇರಿಯಲ್ಲಿ ಬುಧವಾರ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆ ನಡೆಯಿತು.

ತಹಸೀಲ್ದಾರ್ ಎಸ್.ಶಿವರಾಜ ಮಾತನಾಡಿ, ನ.1ರಂದು ತಹಸಿಲ್ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುವುದು. ಅಂದು ಬೆಳಿಗ್ಗೆ 8.30ಕ್ಕೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಗುವುದು. ನಂತರ ಕನ್ನಡ ಗೀತಗಾಯನ ಕಾರ್ಯಕ್ರಮ ನಡೆಯಲಿದೆ ಎಂದರು.

ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಕನ್ನಡ ಭಾಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು, ಕನ್ನಡ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಗೌರವಿಸಲಾಗುವುದು. ನಂತರ ಐತಿಹಾಸಿಕ ಸೋಮಪ್ಪ ದೇವಸ್ಥಾನದಿಂದ ಭುವನೇಶ್ವರಿ ಭಾವಚಿತ್ರದೊಂದಿಗೆ ರಾಜ್ಯೋತ್ಸವ ಮೆರವಣಿಗೆ ನಡೆಯಲಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೃಷಿ, ತೋಟಗಾರಿಕೆ, ಆರೋಗ್ಯ ಇಲಾಖೆಗಳ ಸ್ತಬ್ಧಚಿತ್ರಗಳು, ಸ್ಥಳೀಯ ಕಲಾ ತಂಡದವರು, ಶಾಲಾ ಮಕ್ಕಳು, ನಾನಾ ಸಂಘಟನೆಗಳ ಪದಾಧಿಕಾರಿಗಳು, ನಾಗರಿಕರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮೆರವಣಿಗೆ ಷಾ.ಮಿಯಾಚಂದ್ ಹೈಸ್ಕೂಲ್ ಮೈದಾನದಲ್ಲಿ ಸಮಾರೋಪಗೊಳ್ಳಲಿದೆ ಎಂದು ತಿಳಿಸಿದರು. ತಾಲೂಕು ಮಟ್ಟದ ಅಧಿಕಾರಿಗಳು, ಪ್ರಮುಖರು ಪಾಲ್ಗೊಂಡಿದ್ದರು.

ಸಂಡೂರು ತಾಲೂಕಿನಿಂದ ಅ.21ರಂದು ಕನ್ನಡ ರಥ ಕಂಪ್ಲಿ ತಾಲೂಕಿಗೆ ಆಗಮಿಸಲಿದೆ. ಶಾಲಾ ಮಕ್ಕಳು, ಕಲಾ ತಂಡಗಳೊಂದಿಗೆ ತಾಲೂಕಿನಲ್ಲಿ ಕನ್ನಡ ರಥ ಮೆರವಣಿಗೆ ಸಾಗಲಿದೆ ಎಂದು ತಿಳಿಸಿದರು.