ಕಂಪ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಂವಿಧಾನ ಮಹತ್ವ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಹೊಸಪೇಟೆಯ ಆಜೀಂ ಪ್ರೇಮ್‌ಜಿ ಫೌಂಡೇಷನ್‌ನ ಸಂಪನ್ಮೂಲ ವ್ಯಕ್ತಿ ಎಚ್.ಮಹೇಶ್ ಮಾತನಾಡಿದರು. ಪ್ರಭಾರ ಪ್ರಾಚಾರ್ಯ ಡಾ.ಕೆ.ಮಹೇಶ್, ಸಹಾಯಕ ಪ್ರಾಧ್ಯಾಪಕ ಡಾ.ಜೆ.ಕೃಷ್ಣ, ಸಂಪನ್ಮೂಲ ವ್ಯಕ್ತಿಗಳಾದ ಸಂಜಯ್, ಆರೀಫ್ ಇದ್ದರು. 
ಜಿಲ್ಲೆ

ಸಂವಿಧಾನದ ಹಕ್ಕು-ಕರ್ತವ್ಯ ಸಮನಾಗಿ ಸ್ವೀಕರಿಸಿ

ನರೇಶ್ ಕುಮಾರ್

ಕಂಪ್ಲಿ: ಸಂವಿಧಾನದ ಆಶಯಗಳನ್ನು ಈಡೇರಿಸುವಲ್ಲಿ ಜನರು ಮುಂದಾಗಬೇಕು ಎಂದು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಚಾರ್ಯ ಡಾ.ಕೆ.ಮಹೇಶ್ ಹೇಳಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದಡಿ, ಹೊಸಪೇಟೆಯ ಆಜೀಮ್ ಪ್ರೇಮ್‌ಜಿ ಫೌಂಡೇಷನ್ ಏರ್ಪಡಿಸಿದ್ದ ವಿಶೇಷ ಸಂವಿಧಾನದ ಮಹತ್ವ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂವಿಧಾನ ನೀಡಿದ ಹಕ್ಕು ಮತ್ತು ಕರ್ತವ್ಯಗಳನ್ನು ಸಮನಾಗಿ ಸ್ವೀಕರಿಸಬೇಕು ಎಂದರು.

ಹೊಸಪೇಟೆಯ ಆಜೀಂ ಪ್ರೇಮ್‌ಜಿ ಫೌಂಡೇಷನ್‌ನ ಸಂಪನ್ಮೂಲ ವ್ಯಕ್ತಿ ಎಚ್.ಮಹೇಶ್ ಮಾತನಾಡಿ, ಸಂವಿಧಾನದ ಮಹತ್ವದೊಂದಿಗೆ ಜಾತ್ಯತೀತ, ಪ್ರಜಾಸತ್ತಾತ್ಮಕ, ಸಮಾಜವಾದ ನಿಲುವುಗಳನ್ನು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಸಂಜಯ್, ಆರೀಫ್, ಸಹಾಯಕ ಪ್ರಾಧ್ಯಾಪಕರಾದ ರಾಜ್ಮಾ ಟಿ.ಎಂ.ಆರ್, ಡಾ.ಜೆ.ಕೃಷ್ಣ, ಗ್ರಂಥಪಾಲಕ ಎ.ಜಿ.ವೀರಭದ್ರಪ್ಪ, ಉಪನ್ಯಾಸಕರಾದ ಕೆ.ಎಂ.ರುದ್ರಮ್ಮ, ಈ.ಜಿ.ಆನಂದ್ ಇತರರಿದ್ದರು.